ನಾರಾಯಣ ಎಂಬ ನಾಮದ ಬೀಜವನು ನಾಲಗೆಯಕೂರಿಗೆಯ ಮಾಡಿ ಬಿತ್ತಿರಯ್ಯ
ತನುವ ನೇಗಿಲು ಮಾಡಿ ಹೃದಯ ಹೊಲವನು ಮಾಡಿತನ್ವಿರಾ ಎಂಬ ಎರಡೆತ್ತ ಹೂಡಿಜ್ಞಾನವೆಂಬೊ ಮಿಣಿಯ ಕಣ್ಣಿ ಹಗ್ಗವ ಮಾಡಿಧ್ಯಾನವೆಂಬ ಧಾನ್ಯವ ನೋಡಿ ಬಿತ್ತಿರಯ್ಯ ||1||
ಕಾಮಕ್ರೋಧಗಳೆಂಬ ಗಿಡಗಳನು ತರಿಯಿರಯ್ಯಮದಮತ್ಸರವೆಂಬ ಪೊದೆಯ ಇರಿಯಿರಯ್ಯಪಂಚೇಂದ್ರಿಯಗಳೆಂಬ ಮಂಚಿಕೆಯ ಹಾಕಿರಯ್ಯಚಂಚಲವೆಂಬ ಹಕ್ಕಿಯ ಓಡಿಸಿರಯ್ಯ ||2||
ಉದಯಾಸ್ತಮಾನವೆಂಬ ಎರಡು ಕೊಳಗವ ಮಾಡಿ ಆಯುಶ್ಯದ ರಾಶಿಯನು ಅಳೆಯಿರಯ್ಯಇದು ಕಾರಣ ಕಾಗಿನೆಲೆಯಾದಿಕೇಶವನಮುದದಿಂದ ನೆನೆನೆನೆದು ಸುಖಿಯಾಗಿರಿಯ್ಯ||3||