ನಾವು ಕುರುಬರು, ನಮ್ಮ ದೇವರು ಬೀರಯ್ಯಕಾವ

ನಾವು ಕುರುಬರು, ನಮ್ಮ ದೇವರು ಬೀರಯ್ಯಕಾವ ನಮ್ಮಜ್ಜ ನರಕುರಿಯ ಹಿಂಡುಗಳ

ಅಷ್ಟಮದ ಮತ್ಸರಗಳೆಂತೆಂಬ ಟಗರುಗಳುದೃಷ್ಟಿ ಜೀವಾತ್ಮನೆಂತೆಂಬ ಆಡುಸೃಷ್ಟಿ ಸಿದ್ಧ ಪ್ರಸಿದ್ಧವೆಂತೆಂಬ ಹೋತಗಳುಕಟ್ಟಿ ಕೋಲಿನಲಿ ಇರಿಯುತಿಹ ನಮ್ಮಜ್ಜ ||1||

ವೇದಶಾಸ್ತ್ರ ಪುರಾಣವೆಂತೆಂಬ ಶ್ವಾನಗಳುಕಾದಿದ್ದು ನಮ್ಮಜ್ಜನ ಹಿಂಡೊಳಗೆಹಾದಿಗಾಣದೆ ಕೂಗಿ ಬಾಯಾರಿ ಕಾಲ್ಗೆಡಲುಆದರಿಸಿ ಅಂಬಲಿಯನೆರೆವ ನಮ್ಮಜ್ಜ ||2||

ಅರಿವೆಂಬ ಮರಿಗಳು ಹಿಂಡಿನೊಳಗಡೆ ಬರಲುಮರೆವೆಂಬ ವ್ಯಾಘ್ರ ಕಿರುಬ ತೋಳಗಳು ಹೊಕ್ಕುತರುಬಿ ಹಿಂಜಾವದಲಿ ಕುರಿಯ ಮುರಿವುದ ಕಂಡು ಅರಿತು ಅರಿಯದ ಹಾಗೆ ಇರುವ ನಮ್ಮಜ್ಜ ||3||

ಹುಟ್ಟುದಕೆ ಮೊದಲಿಲ್ಲ ಸಾವುದಕೆ ಕೊನೆಯಿಲ್ಲಹುಟ್ಟು ಸಾವಿನ ಹೊಲಬ ಬಲ್ಲ ನಮ್ಮಜ್ಜಅಷ್ಟು ಪ್ರಾಣಿಗಳಿಗೆ ಇಷ್ಟು ಅಂಬಲಿ ಮಾಡಿಹೊಟ್ಟೆ ತುಂಬುವ ಹಾಗೆ ಎರೆವ ನಮ್ಮಜ್ಜ ||4||

ಕಲಿಯುಗಕೆ ಗೌಡನಿವ ಸಂಗಾತಿ ಮಂತ್ರಿಸುತಕಲಿಯುಗಂಗಳನೆಲ್ಲ ಪೊರೆವಾತನೀತಜಲಜಾಕ್ಷ ಕಾಗಿನೆಲೆಯಾದಿಕೇಶವನ ಮನವೊಲಿಸಿ ಭಜಿಸದ ಮನುಜ ಹುಚ್ಚು ಕುರುಬ ||5||

Leave a Comment

Your email address will not be published. Required fields are marked *