ನಾ ನಿನ್ನ ಧ್ಯಾನದೊಳಿರಲು| ಮಿಕ್ಕ
ಹೀನ ಮಾನವರೇನು ಮಾಡಬಲ್ಲರೋ ರಂಗ||
ಮತ್ಸರಿಸುವರೆಲ್ಲ ಕೂಡಿ ಮಾಡುವುದೇನು
ಅಚ್ಯುತ ನಿನದೊಂದು ದಯೆಯಿರಲು|
ವಾತ್ಸಲ್ಯ ಬಿಡದಿರು ನಿನ್ನ ನಂಬಿದೆ ದೇವ
ಕಿಚ್ಚಿಗೆ ಇರುವೆ ಮುತ್ತುವುದೆ ಪೇಳೆಲೊ ರಂಗ||
ಕನ್ನಡಿಯೊಳಗಿನ ಗಂಟು ಕಂಡು ಕಳ್ಳ
ಕನ್ನವಿಕ್ಕಲವನ ವಶವಹುದೆ|
ನಿನ್ನ ನಂಬಲು ಮುದ್ದು ಪುರಂದರವಿಟ್ಠಲ
ಚಿನ್ನಕ್ಕೇ ಪುಟವನಿಟ್ಟಂತೆ ಅಹುದು ರಂಗ||
—-ಪುರಂದರದಾಸ