ನಾ ಹುಟ್ಟಿದಲ್ಲಿ ಸಂಸಾರ ಹುಟ್ಟಿತ್ತು.
ಸಂಸಾರ ಹುಟ್ಟಿದಲ್ಲಿ ಅe್ಞನ ಹುಟ್ಟಿತ್ತು.
ಅe್ಞನ ಹುಟ್ಟಿದಲ್ಲಿ ಆಶೆ ಹುಟ್ಟಿತ್ತು.
ಆಶೆ ಹುಟ್ಟಿದಲ್ಲಿ ಕೋಪ ಹುಟ್ಟಿತ್ತು.
ಆ ಕೋಪಾಗ್ನಿಯ ತಾಮಸಧೂಮ್ರ ಮುಸುಕಿದಲ್ಲಿ
ನಾ ನಿಮ್ಮ ಮರೆದು ಭವದುಃಖಕ್ಕೀಡಾದೆ.
ನೀ ಕರುಣದಿಂದೆತ್ತಿ ಎನ್ನ ಮರಹ ವಿಂಗಡಿಸಿ ನಿಮ್ಮ ಪಾದವನರುಹಿಸಯ್ಯಾ, ಚೆನ್ನಮಲ್ಲಿಕಾರ್ಜುನಾ.