ನಿನ್ನರಿಕೆಯ ನರಕವೆ ಮೋಕ್ಷ ನೋಡಯ್ಯಾ,

ನಿನ್ನರಿಕೆಯ ನರಕವೆ ಮೋಕ್ಷ ನೋಡಯ್ಯಾ,
ನಿನ್ನನರಿಯದ ಮುಕ್ತಿಯೆ ನರಕ ಕಂಡಯ್ಯಾ.
ನೀನೊಲ್ಲದ ಸುಖವೆ ದಃಖ ಕಂಡಯ್ಯಾ,
ನೀನೊಲಿದ ದುಃಖವೆ ಪರಮಸುಖ ಕಂಡಯ್ಯಾ.
ಚೆನ್ನಮಲ್ಲಿಕಾರ್ಜುನಯ್ಯಾ, ನೀ ಕಟ್ಟಿ ಕೆಡಹಿದ ಬಂಧನವ ನಿರ್ಬಂಧವೆಂದಿಪ್ಪೆನು.

Leave a Comment

Your email address will not be published. Required fields are marked *