ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ

ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ
ನೀ ದೇಹದೊಳಗೊ ನಿನ್ನೊಳು ದೇಹವೊ ಹರಿಯೆ

ಬಯಲೊಳಗೆ ಆಲಯವೊ ಆಲಯದೊಳಗೆ ಬಯಲೊಬಯಲು ಆಲಯವೆರಡು ನಯನದೊಳಗೊನಯನ ಬುದ್ಧಿಯ ಒಳಗೊ ಬುದ್ಧಿ ನಯನದ ಒಳಗೊನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ||1||

ಸವಿಯು ಸಕ್ಕರೆಯೊಳಗೊ ಸಕ್ಕರೆಯು ಸವಿಯೊಳಗೊಸವಿಯು ಸಕ್ಕರೆ ಎರಡು ಜಿಹ್ವೆಯೊಳಗೊಜಿಹ್ವೆ ಮನಸಿನ ಒಳಗೊ ಮನಸು ಜಿಹ್ವೆಯ ಒಳಗೊಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ ||2||

ಕುಸುಮದಲಿ ಗಂಧವೋ ಗಂಧದಲಿ ಕುಸುಮವೋಕುಸುಮ ಗಂಧಗಳೆರಡು ಆಘ್ರಾಣದೊಳಗೊಅಸಮಭವ ಕಾಗಿನೆಲೆಯಾದಿಕೇಶವರಾಯಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೊ ಹರಿಯೆ 3

Leave a Comment

Your email address will not be published. Required fields are marked *