ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋ
ನೀ ದೇಹದೊಳಗೋ ನಿನ್ನೊಳು ದೇಹವೋ||
ಬಯಲು ಆಲಯದೊಳಗೋ ಆಲಯವು ಬಯಲೊಳಗೋ
ಬಯಲು ಆಲಯವೆರಡೂ ನಯನದೊಳಗೋ|
ನಯನ ಬುದ್ಧಿಯ ಒಳಗೋ ಬುದ್ಧಿ ನಯನದ ಒಳಗೋ
ನಯನ ಬುದ್ಧಿಗಳೆರಡೂ ನಿನ್ನೊಳಗೋ ಹರಿಯೇ||
ಸವಿಯು ಸಕ್ಕರೆಯೊಳಗೋ ಸಕ್ಕರೆಯು ಸವಿಯೊಳಗೋ
ಸವಿಯು ಸಕ್ಕರೆಯೆರಡೂ ಜಿಹ್ವೆಯೊಳಗೋ|
ಜಿಹ್ವೆ ಮನಸಿನ ಒಳಗೋ ಮನಸು ಜಿಹ್ವೆಯ ಒಳಗೋ
ಜಿಹ್ವೆ ಮನಸುಗಳೆರಡೂ ನಿನ್ನೊಳಗೋ ಹರಿಯೆ||
ಕುಸುಮದೊಳು ಗಂಧವೋ ಗಂಧದೊಳು ಕುಸುಮವೋ
ಕುಸುಮಗಂಧಗಳೆರಡೂ ಘ್ರಾಣದೊಳಗೋ|
ಅಸಮಭವ ಕಾಗಿನೆಲೆಯಾದಿಕೇಶವರಾಯ
ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೋ||
—-ಕನಕದಾಸ