ನೆಚ್ಚದಿರು ಸಂಸಾರ ನೆಲೆಯಲ್ಲ

ನೆಚ್ಚದಿರು ಸಂಸಾರ ನೆಲೆಯಲ್ಲವೀ ಕಾಯಅಚ್ಯುತನ ನಾಮವನು ನೆನೆದು ಸುಖಿಯಾಗೊ

ಗಳಿಸದಿರು ಸೀಮೆಯನು ಗಳಿಸದಿರು ದ್ರವ್ಯವನುಗಳಿಸದಿರು ನೀ ದುರಿತರಾಶಿಗಳನುನಳಿನನಾಭನ ದಿವ್ಯ ನಾಮವನು ನೆನೆನೆನೆದುನೆಲೆಯಾದ ಪರಮ ಪದವಿಯ ಪಡೆಯೊ ಮನವೆ ||1||

ನೋಡದಿರು ಪರಸತಿಯ ಕೂಡದಿರು ದುರ್ಜನರಆಡದಿರು ಮಾತುಗಳ ಗರ್ವದಿಂದಬೇಡದಿರು ಕೈಯ ಹಿಂದೆಗೆವ ಲೋಭಿಯನು, ಕೊಂ-ಡಾಡದಿರು ಬೀದಿಗೂಳುಂಬ ದೈವಗಳ ||2||

ನಾನಾ ಜನ್ಮದಿ ಬಂದ ನಾಟಕದ ಬೊಂಬೆಯಿದುಮಾನಕ್ಕೆ ಮೆಚ್ಚಿ ನೀ ಮರುಳಾಗದೆಜಾಣತನದಿಂ ಕಾಗಿನೆಲೆಯಾದಿಕೇಶವನಮಾನಸದಲಿ ನೆನೆದು ಸುಖಿಯಾಗು ಮನುಜ ||3||

Leave a Comment

Your email address will not be published. Required fields are marked *