ಪಾಪಾತ್ಮ ನಾನಲ್ಲ ಪಾಪವೆನದಿನಿತಿಲ್ಲ

ಪಾಪಾತ್ಮ ನಾನಲ್ಲ ಪಾಪವೆನದಿನಿತಿಲ್ಲ
ಶ್ರೀಪತಿಯೆ ನಿನಗೆ ನೀನೇ ಮಾಡಿಕೊಂಡೆ

ವರದನು ಕರದಲಿ ಉಷ್ಣಜಲ ಮೃತ್ತಿಕೆಯತರಲು ಕೈ ಸುಟ್ಟಾಗ ಪಣೆಯ ಠೊಣೆದು ಬೈದೆಮರಳಿ ನಾಚಿಕೆ ಇರದೆ ಚರಣಕೆ ಪಾವುಗೆ ತಂ-ದಿರಿಸಿದಪರಾಧ ಎನ್ನದೊ ನಿನ್ನದೊ ದೇವ ||1||

ಬಂದ ಭೃಗು ಮುನಿ ಎದೆಯನೊದೆಯೆ ಆತಗೆ ಪಾಪಅಂದು ಮೂದಲಿಸಿ ಬೈದವರಿಗೆ ದೋಷನಿಂದುದೇ ಹಣೆಯೊಳಗೆಸೆಯೆ ಭೀಷ್ಮಂಗಘವುಹೊಂದಿದಾ ಪಾಂಡವರಿಗೆ ಕುಂದು ಬಂದಿತೆ ದೇವ||2||

ಕುರುಡನಿಗೆ ದಾರಿಯನು ತೋರದೆ ಆತಗೆ ಮುನಿದುದರಿಗೆ ನೂಕಿದಡೆ ಅವನು ಏನು ಮಾಡುವನುಶಿರಕೆ ತಪ್ಪಾಗಿ ಗುರಿಯಿಡಲದು ಸರಳ ತಪ್ಪೆಅರಸನಾಳ ಕೊಂದಡೆ ಆರೇನು ಮಾಡುವರು ||3||

ಕುಣಿಸಿದರೆ ಆಡುವುದು ಬೊಂಬೆ ಸೂತ್ರಮುಖದಿಇನಿತುಂಟೆ ಕಪಟನಾಟಕ ಸೂತ್ರಧಾರಿಇನಿತಾಡಿಸಿದರಾಡುವೆ ಪಾಪ ಪುಣ್ಯಂಗಳಿಂದಎಣಿಕೆಗಾನಲ್ಲ ನೀನಲ್ಲದಿಲ್ಲ ||4||

ತಂದೆತಾಯಿಗಳು ತಮ್ಮ ಕಂದಗೆ ಸರ್ಪಮುಖದಿಂದ ಕಚ್ಚಿಸಲು ಆ ತಪ್ಪು ಕಂದನದೆಮುಂದರಿಯದe್ಞÁನಿಯೆಂದು ಕ್ಷಮಿಸೆಲ್ಲವನು ತಂದೆ ವೇಲಾಪುರದ ಆದಿಕೇಶವನೆ||5||

Leave a Comment

Your email address will not be published. Required fields are marked *