ಬಂದೆವಯ್ಯ ಗೋವಿಂದಶೆಟ್ಟಿ – ನಿಮ್ಮಹರಿವಾಣ ತೀರ್ಥಪ್ರಸಾದ ಉಂಟೆನಲಾಗಿ
ಅಪ್ಪವು ಅತಿರಸ ತುಪ್ಪವು ಚಿನಿಪಾಲುಒಪ್ಪುವ ಸಕ್ಕರೆ ಯಾಲಕ್ಕಿಯುಅಪರೂಪವಾದ ಕಜ್ಜಾಯಗಳನೆಲ್ಲಛಪ್ಪನ್ನ ದೇಶಕ್ಕೆ ಮಾರುವ ಶೆಟ್ಟಿ||1||
ಒಡೆದ ಮಡಕೆ ತಂದು ಇಡಿದು ನಾಮವ ಮಾಡಿಕೊಡುವೆ ನೀ ಕಾಸಿಗೆ ಒಂದೊಂದನುಒಡಲು ತುಂಬಿ ಮಿಕ್ಕ ಅನ್ನವ ಮಾರಿಸಿಒಡವೆಯ ಗಳಿಸುವ ಕಡುಲೋಭಿ ಶೆಟ್ಟಿ ||2||
ಶೇಷಗಿರಿಯಲ್ಲಿ ವಾಸ ಮಾಡಿಕೊಂಡುದೇಶದೇಶಕ್ಕೆ ಹೆಸರಾದ ಶೆಟ್ಟಿಕಾಸುಕಾಸಿಗೆ ಬಡ್ಡಿ ಗಳಿಸಿಕೊಂಬ ಆದಿಕೇಶವ ನಾರಾಯಣ ತಿಮ್ಮಶೆಟ್ಟಿ ||3||