ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು

ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು
ಪದುಮನಾಭನ ಪಾದದೊಲುಮೆ ಎನಗಾಯಿತು

ಹರಿತೀರ್ಥ ಪ್ರಸಾದ ಎನ್ನ ಜಿಹ್ವೆಗೊದಗಿತುಹರಿಯ ನಾಮಾಮೃತ ಕಿವಿಗೊದಗಿತುಹರಿಯ ದಾಸರು ಎನ್ನ ಬಂಧು ಬಳಗವಾದರುಹರಿಯ ಶ್ರೀಮುದ್ರೆ ಆಭರಣವಾಯ್ತು ||1||

ಮುಕುತರಾದರು ಎನ್ನ ನೂರೊಂದು ಕುಲದವರುಮುಕುತಿ ಮಾರ್ಗಕೆ ಯೋಗ್ಯ ನಾನಾದೆನೊಅಕಳಂಕ ಶ್ರೀಹರಿ ಭಕುತಿಗೆನ್ನ ಮನ ಬೆಳೆದುರುಕುಮಿಣಿಯರಸ ಕೈವಶನಾದನೆನಗೆ ||2||

ಇಂದೆನ್ನ ಜೀವಕ್ಕು ಸಕಲ ಸಂಪದವಾಯ್ತುಮುಂದೆನ್ನ ಜನ್ಮ ಸಫಲವಾಯಿತುತಂದೆ ಶ್ರೀ ಕಾಗಿನೆಲೆಯಾದಿಕೇಶವರಾಯಬಂದೆನ್ನ ಹೃದಯದಲಿ ನೆಲೆಯಾಗಿ ನಿಂತ ||3||

Leave a Comment

Your email address will not be published. Required fields are marked *