ಬಯಗುತನಕ ಆಟ ಕೂಟ

ಬಯಗುತನಕ ಆಟ ಕೂಟ ಊಟದ ಕೆಲಸ ಉಂಡ ಮೇಲೆ ಶಯನ
ಬಯಲಾಯಿತು ಈ ಒಗತನವೆಲ್ಲ ರಕ್ಷಿಸಯ್ಯ ರಘುಕುಲ ತಿಲಕ

ಪುರಾಣವಿಲ್ಲ ಪುಣ್ಯಕತೆಯಿಲ್ಲ ಪಾರಾಯಣದಿ ಮನಸಿಲ್ಲತರೋಣ ಬರೋಣ ತಿನ್ನೋಣ ಮಲಗೋಣ ಮತ್ತೇಳೋಣ ||1||

ಕಣ್ಣಿಗೆ ಜೋಂಪು ಹತ್ತುವತನಕ ಅನ್ಯವಿಷಯ ಮಾತುಕತೆಯಾಟಹೆಣ್ಣು ಹೊನ್ನು ಮಣ್ಣು ಮಮಕಾರದಿ ಒಳಹೊರಗಿಣುಕಾಟ||2||

ಹೀಗಾಗಿ ನಿನ್ನಲ್ಲಿಗೆ ಬಂದೆ ಇನ್ನಾದರೂ ಸಲಹೊ ಸಿರಿಕಾಗಿನೆಲೆಯಾದಿಕೇಶವ ಶಿರಬಾಗಿ ಬೇಡಿಕೊಂಬೆ ||3||

Leave a Comment

Your email address will not be published. Required fields are marked *