ಬಿಡು ಬಿಡು ಬಾಹ್ಯದೊಳು ಡಂಭವ
ಮಾನಸದೊಳು ಎಡೆಬಿಡದಿರು ಶಂಭುವ
ಮನದೊಳು ವಂಚಿಸಿ ಹೊರಗೆ ನೀ ಕೀರ್ತಿಯ
ಪಡೆದರೆ ಶಿವ ನಿನಗೊಲಿಯನು ಮರುಳೆ||
ಜನಕಂಜಿ ನಡೆಕೊಂಡರೇನುಂಟು ಲೋಕದಿ
ಮನಕಂಜಿ ನಡೆಕೊಂಬುದೇ ಚಂದ|
ಜನರೇನ ಬಲ್ಲರು ಒಳಗಾಗೋ ಕೃತ್ಯವ
ಮನವರಿಯದ ಕಳ್ಳತನವಿಲ್ಲವಲ್ಲ||
ಮನದಲಿ ಶಿವ ತಾ ಮನೆಮಾಡಿಕೊಂಡಿಹ
ಮನಮೆಚ್ಚಿ ನಡೆದರೆ ಶಿವ ತಾ ಮೆಚ್ಚುವ|
ಮನಕಂಜಿ ನಡೆಯದೆ ಜನಕಂಜಿ ನಡೆದರೆ
ಮನದಾಣ್ಮ ಗುರುಸಿದ್ಧ ಮರೆಯಾಗೋನಲ್ಲ||
—-ಸರ್ಪಭೂಷಣ ಶಿವಯೋಗಿ