ಬೀದಿಯೊಳು ಯಾತರಾ ನಂಟು ಬೇಡ

ಬೀದಿಯೊಳು ಯಾತರಾ ನಂಟು ಬೇಡ ದಮ್ಮಯ್ಯ
ಭೇದಿಸಿ ನೋಡುವರುಂಟು ಬೆಂಬತ್ತಿ ಬಾರದಿರಯ್ಯ

ಕಂಡ ಕಂಡ ಠಾವಿನಲಿ ಕಣ್ಣೆತ್ತಿ ನೋಡದಿರಯ್ಯಕಂಡಿಯೊಳು ಕೈಸನ್ನೆ ಮಾಡದಿರಯ್ಯಗಂಡನುಳ್ಳವಳ ಜೊತೆ ಭಂಡಾಟವ್ಯಾಕಯ್ಯಕೊಂಡೆಗಾತಿಯರುಂಟು ದುಡುಕದಿರಯ್ಯ ||1||

ಬೇಳುವೆಯ ಮಾತಾಡಿ ಗಾಳ ಹಾಕದಿರಯ್ಯಬಾಳೆ ಹಣ್ಣಿಗೆ ಕೊಡಲಿ ಬೇಕೆ ದಮ್ಮಯ್ಯಆಳುವ ಅರಸಾಗಿ ನಿನಗಾವ ಬರವಯ್ಯಮೇಳದವರ ಬಿಟ್ಟು ಮೇರೆದಪ್ಪುವರೇನಯ್ಯ ||2||

ನೋಡುವರು ಜನರೆಲ್ಲ ನಾಚಿಕೆ ಇಲ್ಲವೇನಯ್ಯಜೋಡು ಕಳಸವ ಹಿಡಿಯದಿರು ಜೋಕೆ ದಮ್ಮಯ್ಯಮಾಡುವ ದೈನ್ಯ ಬಲ್ಲೆ ಮದ್ದೂರು ನರಸಿಂಹಯ್ಯಕೂಡಿದ ಕನಕನಾದಿಕೇಶವ ನೀನಹುದಯ್ಯ ||3||

Leave a Comment

Your email address will not be published. Required fields are marked *