ಭಾವಿಸಿ ನೋಡಿದಡೆ ಅಂಗವಾಯಿತ್ತು,

ಭಾವಿಸಿ ನೋಡಿದಡೆ ಅಂಗವಾಯಿತ್ತು,
ಅಂಗಸಂಗವಾಗಿ ಸಂಯೋಗವ ಮರೆದು, ಲಿಂಗಸೈವೆರಗಾದೆ.
ಲಿಂಗೈಕ್ಯ, ನಿಮ್ಮನಗಲದೆ ಅಂಗರುಚಿಗಳ ಮರೆದು,
ಲಿಂಗರುಚಿಗಳಲ್ಲಿ ಸೈವೆರಗಾದೆ.
ಲಿಂಗ ಸೈವೆರಗಾದ ಬಳಿಕ ಚೆನ್ನಮಲ್ಲಿಕಾರ್ಜುನನ ಕೊಂದು ಸಾವ ಭಾಷೆ.

Leave a Comment

Your email address will not be published. Required fields are marked *