ಮಗುವು ಕಾಣಿರಯ್ಯ ಮಾಯದ ಮಗುವು

ಮಗುವು ಕಾಣಿರಯ್ಯ | ಮಾಯದ | ಮಗುವು ಕಾಣಿರಯ್ಯ
ಸುಗುಣ ವಾದಿರಾಜರೆ ಮೂಜಗವನು ತನ್ನುದರದೊಳಿಟ್ಟ

ಮಾಯಾ ಪೂತನಿಯ ಕೊಂದು ಕಾಯವ ಕೆಡಹಿ ಶಕಟನ್ನಸಾಯಬಡಿದು ಧೇನುಕನ ವೃಷಭಾಸುರನನೋಯ ನೋಡದ್ಯಮಳಾರ್ಜುನಂಗೆ ಸಾಯುಜ್ಯವನೆ ಇತ್ತು ತನ್ನತಾಯಿಗೆ ತಾ ಮಣ್ಣ ಮೆದ್ದು ಬಾಯ ಬಿಟ್ಟು ತೋರಿಸಿದ||1||

ಏಕವರ್ಣವಾಗಿಯೆ ಸಕಲಲೋಕವು ಆಕಾರವಳಿಯೆಏಕಮೇವಾದ್ವಿತೀಯನೆಂಬಾಗಮಕೆ ಸರಿಯಾಗಿಶ್ರೀಕರಾಂಬುಜದಿಂ ಪಾದಾಂಗುಲಿಯಂ ಪಿಡಿದು ಬಾಯೊಳಿಟ್ಟುಶ್ರೀಕಾಂತ ವಟಪತ್ರದ ಮೇಲೊರಗಿ ಬ್ರಹ್ಮನ ಪಡೆದ||2||

ಕಡಹದ ಮರನೇರಿ ಸಂಗಡಿಗರೊಡನೆ ಕಾಳಿಂದಿಯಮಡುವ ಧುಮುಕಿ ಧುಮುಕಿ ಕಲಕಿ ಆ ಕಾಳಿಂಗನಪೆಡೆಯ ತುಳಿದು ಜಡಿಯಲವನ ಮಡದಿಯರು ಬೇಡಿಕೊಳ್ಳೆಕಡಲಿಗಟ್ಟಿ ಬಂದು ತಾಯ ತೊಡೆಯ ಮೇಲೆ ಮಲಗಿದಂಥ ||3||

ಕಲ್ಲಿಗಟ್ಟಿ ಗೂಡೆಯಲಿ ಗೋಲಿಯ ಚೀಲವನಿಕ್ಕಿಹಿಲ್ಲಿ ಕಟ್ಟೋಗರ ಕಡಕಲಕ್ಕಳೆಯಾ ತುದಿಯಲಿನಿಲ್ಲಿಸಿ ಪೆಗಲೊಳು ಕೊಂಬು ಕೋಲನೆ ಪಿಡಿದುಗೊಲ್ಲರೊಡಗೂಡಿ ನಮ್ಮೆಲ್ಲರ ಗೋವುಗಳ ಕಾಯ್ದ ||4||

ಶ್ರುತಿತತಿಗೆ ಗೋಚರಿಸುವ ಅಚ್ಯುತನು ಭುವನಾದಿಮೂರ್ತಿರತಿಪತಿ ಪಿತನು ಶೇಷಾದ್ಯಾರಾಧ್ಯನುಕ್ಷಿತಿಗಧಿಕ ವೇಲಾಪುರದ ಪತಿ ವೈಕುಂಠ ಕೇಶವನುಯತಿಯೆ ನೀ ನೋಡಯ್ಯ ಶರಣಾಗತನ ತೊಡೆಯಿಂ ಮಾಯವಾದ ||5||

Leave a Comment

Your email address will not be published. Required fields are marked *