ಮನ ಶುದ್ಧಿಯಿಲ್ಲದವಗೆ

ಮನ ಶುದ್ಧಿಯಿಲ್ಲದವಗೆ ಮಂತ್ರದ ಫಲವೇನು|
ತನು ಶುದ್ಧಿಯಿಲ್ಲದವಗೆ ತೀರ್ಥದ ಫಲವೇನು||
ಮಿಂದಲ್ಲಿ ಫಲವೇನು ಮೀನು ಮೊಸಳೆಯಂತೆ
ನಿಂದಲ್ಲಿ ಫಲವೇನು ಶ್ರೀಶೈಲದ ಕಾಗೆಯಂತೆ|
ಹೊರಗೆ ಮಿಂದು ಒಳಗೆ ಮೀಯದವರ ಕಂಡು
ಬೆರಗಾಗಿ ನಗುತಿದ್ದ ಪುರಂದರವಿಟ್ಠಲ||

—ಪುರಂದರದಾಸ

Leave a Comment

Your email address will not be published. Required fields are marked *