ಮರೆಯದಿರು ಹರಿಯ

ಮರೆಯದಿರು ಹರಿಯಮರೆವರೆ ಮೂರು ಲೋಕದ ದೊರಿಯ

ಮದಗಜ ಹರಿಯೆಂದು ಕರೆಯಲುಒದಗಿ ಆಕ್ಷಣ ಬಂದುಮುದದಿ ನಕ್ರನ ಕೊಂದು ಸಲ-ಹಿದ ಸದ್ಭಕ್ತರ ಬಂಧುಹದುಳ ಪ್ರಹ್ಲಾದನ ಹೆದರಿಸಿದಸುರನಉದರವ ಬಗೆದಂಥದುಭುತ ಮಹಿಮನ||1||

ನಾರಿಯು ತನ್ನ ಕರೆದ ಮಾತ್ರದಿಸೀರೆಯ ಮಳೆಗರೆದಕ್ರೂರ ಖಳನ ತರಿದು ಆ ಪಾಂಡವರಆರಣ್ಯದಿ ಪೊರೆದಗಾರಾದಜಮಿಳ ನಾರಗ ಎನಲುಪಾರಗಾಣಿಸಿದಪಾರ ಗುಣನಿಧಿಯ ||2||

ಒಂದು ಬಾರಿ ಶ್ರೀಶಾ ಎಂದರೆಬಂದ ದುರಿತ ನಾಶಾಬೆಂದವು ಭವ ಪಾಶಾ – ಅವಗೆಂದೆಂದಿಗಿಲ್ಲ ಕ್ಷೇಶಾತಂದೆ ಕದರುಂಡಲಗಿ ಹನುಮಯ್ಯನೊಡೆಯಚಂದಾದಿಕೇಶವನ ನೆನೆದವರೆಂದಿಗು ಧನ್ಯರು||3||

Leave a Comment

Your email address will not be published. Required fields are marked *