ಮುಳ್ಳು ಮೊನಿಯ ಮ್ಯಾಲ ಮೂರು ಕೆರಿಯ ಕಟ್ಟಿಎರಡು ಹೂಳು, ಒಂದು ತುಂಬಲೆ ಇಲ್ಲ ||1||
ತುಂಬದ ಕೆರೆಗೆ ಮೇಯಾಕ ಬಂದವು ಮೂರು ಎಮ್ಮಿಎರಡು ಗೊಡ್ಡು ಒಂದು ಕಂದು ಹಾಕಿ ಕರುವೇ ಇಲ್ಲ ||2||
ಕರುವಿಲ್ಲದ ಎಮ್ಮಿಯ ಕೂಡಿದರ ಮೂವರು ಹೆಣ್ಮಕ್ಕಳಾಇಬ್ಬರು ಬಂಜಿಯರು, ಒಬ್ಬಾಕಿ ಹಡೆದೇ ಇಲ್ಲ ||3||
ಹಡೆಯದ ಹೆಣ್ಣ ಕೂಡಿಕೊಂಡರು ಮೂವರು ಕುಂಬಾರರುಇಬ್ಬರು ಚೊಂಚರು, ಒಬ್ಬಗೆ ಕೈಯೇ ಇಲ್ಲ ||4||
ಕೈಯಿಲ್ಲದ ಕುಂಬಾರ ಮಾಡಿಕೊಟ್ಟ ಮೂರು ಮಡಿಕಿಗಳಎರಡು ದದ್ದು, ಒಂದಕೆ ತಳವೆ ಇಲ್ಲ||5||
ತಳವಿಲ್ಲದ ಮಡಕಿಗಿ ಕೊಟ್ಟಾರ ಮೂರು ರೊಕ್ಕಎರಡು ನಕಲು, ಒಂದು ಸವಕಲು ||6||
ಸವಕಲು ರೊಕ್ಕದಾಗ ಕುಚ್ಚಲಿಕೆ ತಂದಾರ ಮೂರ ಕಡುಬಎರಡು ಕುದಿಯಲಿಲ್ಲ ಒಂದು ಬೇಯಲಿಲ್ಲ ||7||
ಬೇಯದ ಕಡುಬಿಗಿ ಬಂದಾರ ಮೂವರು ಬೀಗರಇಬ್ಬರು ಬೊಚ್ಚರು, ಒಬ್ಬಗೆ ಹಲ್ಲೇ ಇಲ್ಲ ||8||
ಹಲ್ಲಿಲ್ಲದ ಬೀಗನಿಗೆ ಕೊಟ್ಟಾರ ಮೂರು ಚಿಕಣಿ ಅಡಕಿಎರಡು ಗೋಟು, ಒಂದು ಸಿಡಿದು ಕಾಣೆಯಾಯಿತು ||9||
|
ಕಾಣೆಯಾದ ಅಡಿಕಿಯ ನೋಡಾಕಂತ ಹೋಗ್ಯಾರ ಮೂರ ಮಂದಿಇಬ್ಬರು ಒಂಚೊರಿ, ಒಬ್ಬಗೆ ಕಣ್ಣೇ ಇಲ್ಲ||10||
ಕಣ್ಣಿಲ್ಲದವನ ಕರೆತರಬೇಕಂತ ಹೋಗ್ಯಾರ ಮೂರ ಮಂದಿಇಬ್ಬರು ಕುಂಟರು, ಒಬ್ಬಗೆ ಕಾಲೇ ಇಲ್ಲ ||11||
ಕಾಲಿಲ್ಲದವನ ಹೊತ್ತು ತರಬೇಕಂತ ಹೋಗ್ಯಾರ ಮೂರು ಮಂದಿ ಇಬ್ಬರು ಲಂಡರು, ಒಬ್ಬ ಮೊಂಡ ||12||
ಕಾಗಿನೆಲೆ ಕನಕದಾಸ ಹಾಕಿದ ಮುಂಡಗಿಇದ ತಿಳಿದವ ಜಾಣ. ಒಡೆದು ಹೇಳಿದವ ಕೋಣ||13||