ಯಾರ ಪ್ರೇಮದ ಪರಮಪೂರವು

ಯಾರ ಪ್ರೇಮದ ಪರಮಪೂರವು ನೀಚರೆದೆಗೂ ಹರಿಯಿತೋ,
ಯಾವ ಲೋಕಾತೀತಮಹಿಮನ ಕರಣೆ ಲೋಕಕೆ ದುಡಿಯಿತೋ,
ಯಾವನಪ್ರತಿ-ಮಹಿಮನೋ ಮೇಣ್ ಮಾತೆ ಸೀತೆಯ ನಾಥನೋ,
ಯಾರು ಸೀತೆಯ ಭಕುತಿಯಿಂದಲಿ ಜ್ಞಾನದೇಹದಿ ವ್ಯಾಪ್ತನೋ

ಯಾರು ಮಧುತರ ಶಾಂತಗೀತೆಯ ಯುದ್ಧರಂಗದಿ ಮೊಳಗುತ
ಪ್ರಳಯಶಬ್ದವ ಸ್ತಬ್ಧಗೊಳಿಸುತ ಸಿಂಹನಾದವ ಸಿಡಿಸುತ
ಮೋಹತಿಮಿರವನಿಲ್ಲಗೈಯುತ ಕೃಷ್ಣರೂಪದಿ ನಿಂದನೋ
ಅವನೆ ಇಂದಿಗೆ ರಾಮಕೃಷ್ಣನ ಹೆಸರೊಳೆಸೆಯುತಲಿರುವನು!

—-ಮುರಳೀಧರ

Leave a Comment

Your email address will not be published. Required fields are marked *