ರಾಮಮಂತ್ರವ ಜಪಿಸೋ ಹೇ ಮನುಜಾ||
ಆ ಮಂತ್ರ ಈ ಮಂತ್ರ ನೆಚ್ಚಿ ನೀ ಕೆಡಬೇಡ
ಸೋಮಶೇಖರ ತನ್ನ ಭಾಮಿನಿಗೊರೆದಿಹ||
ಕುಲಹೀನನಾದರೂ ಕೂಗಿ ಜಪಿಸುವ ಮಂತ್ರ
ಸರಿವ ಭೀತಿಯೊಳು ಉಚ್ಚರಿಪ ಮಂತ್ರ|
ಹಲವು ಪಾಪಂಗಳ ಹದಗೆಡಿಸುವ ಮಂತ್ರ
ಸುಲಭದಿಂದಲಿ ಸ್ವರ್ಗ ಸೂರೆಗೊಳ್ಳುವ ಮಂತ್ರ||
ಸಕಲ ವೇದಗಳಿಗೆ ಸಾರವೆನಿಪ ಮಂತ್ರ
ಮುಕುತಿ ಮಾರ್ಗಕೆ ಇದೇ ಮೂಲಮಂತ್ರ|
ಭಕುತಿರಸಕೆ ಭವ್ಯ ಮಾರ್ಗ ತೋರುವ ಮಂತ್ರ
ಸುಖನಿಧಿ ಪುರಂದರವಿಟ್ಠಲನ ಮಹಾಮಂತ್ರ||
—-ಪುರಂದರದಾಸ