ಲೋಕವ ಹಿಡಿದು ಲೋಕದ ಸಂಗದಂತಿಪ್ಪೆ.

ಲೋಕವ ಹಿಡಿದು ಲೋಕದ ಸಂಗದಂತಿಪ್ಪೆ.
ಆಕಾರವಿಡಿದು ಸಾಕಾರಸಹಿತ ನಡೆವೆ.
ಹೊರಗೆ ಬಳಸಿ ಒಳಗೆ ಮರೆದಿಪ್ಪೆ.
ಬೆಂದನುಲಿಯಂತೆ ಹುರಿಗುಂದದಿಪ್ಪೆ.
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯಾ,
ಹತ್ತರೊಳಗೆ ಹನ್ನೊಂದಾಗಿ ನೀರತಾವರೆಯಂತಿಪ್ಪೆ.

Leave a Comment

Your email address will not be published. Required fields are marked *