ವನಜ ಮುಖಿಯರ ಮನದಿಷ್ಟಾರ್ಥವನೀವನ – ಶ್ರೀ ಕೃಷ್ಣ ಎನ್ನಿರೊಮನು ಮುನಿಜನರನು ಅನುದಿನದೊಳು ಪೊರೆವನ – ಶ್ರೀ ಕೃಷ್ಣ ಎನ್ನಿರೊ
ಪಣ್ಣ ಕೊಯ್ದನನುಜಗೆ ಸಹಾಯನಾದನ _ ಶ್ರೀ ಕೃಷ್ಣ ಎನ್ನಿರೊಸಣ್ಣ ಸೀರೆಯ ನಲ್ವೆಣ್ಣು ರೂಪಾದನ _ ಶ್ರೀ ಕೃಷ್ಣ ಎನ್ನಿರೊಅಣ್ಣನ ವೈರಿಯ ಮಗನ ಕೊಂದಾತನ _ ಶ್ರೀ ಕೃಷ್ಣ ಎನ್ನಿರೊಬಣ್ಣಿಸಲರಿಯೆ ನಾನಿವನ ಮಹಿಮೆಯ _ ಶ್ರೀ ಕೃಷ್ಣ ಎನ್ನಿರೊ ||1||
ಮುತ್ತಯ್ಯನಿರೆ ಮೊಮ್ಮಗಗೆ ಪಟ್ಟಗಟ್ಟಿದನ _ ಶ್ರೀ ಕೃಷ್ಣ ಎನ್ನಿರೊಹೆತ್ತವಳಿರೆ ತಾಯ ಬೇರೆ ಪಡೆದಾತನ _ ಶ್ರೀ ಕೃಷ್ಣ ಎನ್ನಿರೊಮತ್ತೇಭಗಾಮಿನಿಗಾಗಿ ವನವಾಸ ಪೋದನ _ ಶ್ರೀ ಕೃಷ್ಣ ಎನ್ನಿರೊಮತ್ತೆ ಹಿರಣ್ಯಕಗೆ ಕಂಬದಲಿ ತೋರ್ದನ – ಶ್ರೀ ಕೃಷ್ಣ ಎನ್ನಿರೊ ||2||
ಉಗುರು ಕೊನೆಗಳಿಂದ ನಗವನೆತ್ತಿದನ _ ಶ್ರೀ ಕೃಷ್ಣ ಎನ್ನಿರೊಬೊಗಸೆಗಂಗಳ ಬಾಲೆಯರ ತಂದಾತನ _ ಶ್ರೀ ಕೃಷ್ಣ ಎನ್ನಿರೊಮಗಳ ಗಂಡನ ಶಿರವನೆ ಛೇದಿಸಿದನ _ ಶ್ರೀ ಕೃಷ್ಣ ಎನ್ನಿರೊಸುಗುಣ ತನ್ನ ಕಾಗಿನೆಲೆಯಾದಿಕೇಶವನ _ ಶ್ರೀ ಕೃಷ್ಣ ಎನ್ನಿರೊ ||3||