ವ್ಯರ್ಥವಾಯಿತಲ್ಲ ಜನ್ಮವು ಸಾರ್ಥಕಾಗಲಿಲ್ಲ

ವ್ಯರ್ಥವಾಯಿತಲ್ಲ ಜನ್ಮವು ಸಾರ್ಥಕಾಗಲಿಲ್ಲ
ಅರ್ಥದಾಸೆಯಲಿ ಪೃಥ್ವಿಯೊಳಗೆ ಸುತ್ತಿಮತ್ತನಾಗಿ ಬಲು ಕೃತ್ಯಗಳನು ಮಾಡಿ

ಹರಿಯ ನೆನಯಲಿಲ್ಲ ಹರುಷದಿ ಗರುವ ಪುಟ್ಟಿತಲ್ಲಪರಮ ಮೂಢರಲಿ ನಿರುತ ಸಂಗವ ಮಾಡಿಗುರು ಹಿರಿಯರ ದಯ ದೊರೆಯದೆ ಸುಮ್ಮನೆ||1||

ಏನು ಪೇಳಲೇನು ಎನಗೆ ಹೀನ ಬಿಡದು ಮುನ್ನಶ್ವಾನಗಿಂತಲು ಬಲು ಮಾನಗೆಟ್ಟು ನಾದೀನನಾಗಿ ಮನೆಮನೆಗಳ ತಿರುಗಿ ||2||

ಭಾಗವತರ ಪಾದಕ್ಕೊಂದಿನ ಬಾಗಿ ನಡೆಯಲಿಲ್ಲರಾಗುರಂಗು ಭಕ್ತಿ ಭಾವದೊಳುಬೀಗಿ ಚೆನ್ನಕೇಶವನನು ನೆನೆಯದೆ ||3||

Leave a Comment

Your email address will not be published. Required fields are marked *