ಶರೀರವೆಂತೆಂಬುವ ಹೊಲವ

ಶರೀರವೆಂತೆಂಬುವ ಹೊಲವ ಹಸನು ಮಾಡಿ
ಪರತತ್ತ್ವ ಬೆಳೆಯನೆ ಬೆಳೆದುಣ್ಣಿರೋ||

ಶಮೆದಮೆಯೆಂದೆಂಬ ಎರಡೆತ್ತುಗಳ ಹೂಡಿ
ವಿಮಲಮಾನಸವ ನೇಗಿಲವನೆ ಮಾಡಿ
ಮಮಕಾರವೆಂದೆಂಬ ಕರಿಕೆಯ ಕಳೆದಿಟ್ಟು
ಸಮತೆಯೆಂದೆಂಬುವ ಗೊಬ್ಬರ ಚೆಲ್ಲಿ||

ಗುರುವರನುಪದೇಶವೆಂಬ ಬೀಜದ ಬಿತ್ತಿ
ಮೆರೆವ ಸಂಸ್ಕಾರವೃಷ್ಟಿಯ ಬಲದಿ
ಅರಿವೆಂಬ ಪೈರನೆ ಬೆಳೆಸುತೆ ಮುಸುಗಿರ್ದ
ದುರಿತದುರ್ಗುಣವೆಂಬ ಕಳೆಯನು ಕಿತ್ತು||

ಚಿರಮುಕ್ತಿಯೆಂದೆಂಬ ಧಾನ್ಯವ ಬೆಳೆದುಂಡು
ಪರಮಾನಂದದೊಳು ದಣ್ಣನೆ ದಣಿದು
ಗುರುಸಿದ್ಧನಡಿಗಳಿಗೆರಗುತ್ತ ಭವವೆಂಬ
ಬರವನು ತಮ್ಮ ಸೀಮೆಗೆ ಕಳುಹಿ||

—-ಸರ್ಪಭೂಷಣ ಶಿವಯೋಗಿ

1 thought on “ಶರೀರವೆಂತೆಂಬುವ ಹೊಲವ”

Leave a Comment

Your email address will not be published. Required fields are marked *