ಶಿವ ಶಿವ ಶಿವ ಎನ್ನಿರೊ – ಮೂಜಗದವರೆಲ್ಲ

ಶಿವ ಶಿವ ಶಿವ ಎನ್ನಿರೊ – ಮೂಜಗದವರೆಲ್ಲಶಿವ ಶಿವ ಶಿವ ಎನ್ನಿರೊ

ಆಗಮ ಸಿದ್ಧಾಂತ ಮೂಲದ ಜಪವಿದು ಶಿವಶಿವಶಿವ ಎನ್ನಿರೋ – ನಿಮ್ಮರೋಗದ ಮೂಲವ ಕೆಡಿಪ ಔಷಧವಿದು ಶಿವಶಿವಶಿವ ಎನ್ನಿರೊ ||1||

ಮನುಜ ಜನ್ಮದಿ ಹುಟ್ಟಿ ಮೈಮರೆದಿರಬೇಡಿ ಶಿವಶಿವಶಿವ ಎನ್ನಿರೋ – ನಿಮ್ಮತನುಮನ ಪ್ರಾಣವ ವ್ಯರ್ಥವ ಮಾಡದೆ ಶಿವಶಿವಶಿವ ಎನ್ನಿರೊ ||2||

ಅಪರಾಧಕೋಟಿ ತ್ಯಜಿಸಬೇಕಾದರೆ ಶಿವಶಿವಶಿವ ಎನ್ನಿರೋ – ಮುಂದೆಉಪಮಿತರೋರ್ಮಿತರರಿಯದ ಜಪವಿದು ಶಿವಶಿವಶಿವ ಎನ್ನಿರೊ||3||

ಜವನ ಬಾಧೆಯ ನೀವು ಜಯಿಸಬೇಕಾದರೆ ಶಿವಶಿವಶಿವ ಎನ್ನಿರೋ – ನಿಜಸವಿಮಲ ಮುಕ್ತಿಯ ಪಡೆಯಬೇಕಾದರೆ ಶಿವಶಿವಶಿವ ಎನ್ನಿರೊ ||4||

ಭುವನಕೆ ಬಲ್ಲಿದರಾಗಬೇಕಾದರೆ ಶಿವಶಿವಶಿವ ಎನ್ನಿರೋ – ನೀವುಭವನ ಪದವಿಯನು ಪಡೆಯಬೇಕಾದರೆ ಶಿವಶಿವಶಿವ ಎನ್ನಿರೊ ||5||

ಗುರುಲಿಂಗ ಜಂಗಮವ ಅರಿಯಬೇಕಾದರೆ ಶಿವಶಿವಶಿವ ಎನ್ನಿರೋ – ಮುಂದೆಪರಮಾತ್ಮನ ನೀವು ತಿಳಿಯಬೇಕಾದರೆ ಶಿವಶಿವಶಿವ ಎನ್ನಿರೊ||6||

ಪೃಥ್ವಿಗೆ ಸದ್ಗುರು ಆಗಬೇಕಾದರೆ ಶಿವಶಿವಶಿವ ಎನ್ನಿರೋ – ನೀವುತತ್ತ್ವಪತಿ ಆದಿಕೇಶವನ ಕೂಡಬೇಕಾದರೆ ಶಿವಶಿವಶಿವ ಎನ್ನಿರೊ||7||

Leave a Comment

Your email address will not be published. Required fields are marked *