ಶ್ರೀರಾಮ ಎನ್ನಿರೊ ಮೂಜಗದವರೆಲ್ಲಈರೇಳು ಭುವನ ತನ್ನುದರದೊಳಿಟ್ಟನ
ಅನಿಮಿಷರಂದದಿ ವನವಾಸಕೆ ಹೋದವನ _ ಶ್ರೀರಾಮ ಎನ್ನಿರೊಮನಸಿಜ ನಾರಿಯ ಪಿತನ ಕೊಂದನ ಪಿತನ ಪೊತ್ತವನ _ ಶ್ರೀರಾಮ ಎನ್ನಿರೊಘನ ಕೋಡ ಕೊನೆಯಿಂದ ಧರಣಿಯ ತಾಳ್ದವನ _ ಶ್ರೀರಾಮ ಎನ್ನಿರೊದಿನಕರನಳಿವಿನಲಿ ಪಗೆಯ ಗೆದ್ದಾತನ _ ಶ್ರೀರಾಮ ಎನ್ನಿರೊ||1||
ಗಜವನೇರಿದವನ ತಂದೆಯ ತಾಯನಳೆದವನ _ ಶ್ರೀರಾಮ ಎನ್ನಿರೊಭುಜಬಲದಿಂದ ಭೂಪಾಲರ ಗೆದ್ದವನ _ ಶ್ರೀರಾಮ ಎನ್ನಿರೊನಿಜಮುನಿಗಳ ವನದಿಂದ ತನಯರ ತಂದವನ _ ಶ್ರೀರಾಮ ಎನ್ನಿರೊಭುಜಗಧರನ ಕೈಯ ಆಯುಧವನು ತಂದವನ _ ಶ್ರೀರಾಮ ಎನ್ನಿರೊ ||2||
ಪೆಣನ ಭೋಜನ ಮಾಡಿದವರ ವಾಸವ ಹೊಕ್ಕವನ _ ಶ್ರೀರಾಮ ಎನ್ನಿರೊತೃಣಕೆ ಬಾಯಿತ್ತನ ಮೇಲೇರಿ ಬಪ್ಪನ _ ಶ್ರೀರಾಮ ಎನ್ನಿರೊ ಅಣುರೇಣು ತೃಣದೊಳು ಪರಿಪೂರ್ಣನಾದನ _ ಶ್ರೀರಾಮ ಎನ್ನಿರೊಪ್ರಣವಗೋಚರ ಕಾಗಿನೆಲೆಯಾದಿಕೇಶವನ _ ಶ್ರೀರಾಮ ಎನ್ನಿರೊ ||3||