ಸಂಗದಿಂದಲ್ಲದೆ ಅಗ್ನಿ ಹುಟ್ಟದು,
ಸಂಗದಿಂದಲ್ಲದೆ ಬೀಜ ಮೊಳೆದೋರದು,
ಸಂಗದಿಂದಲ್ಲದೆ ಹೂವಾಗದು.
ಸಂಗದಿಂದಲ್ಲದೆ ಸರ್ವಸುಖದೋರದು.
ಚೆನ್ನಮಲ್ಲಿಕಾರ್ಜುನಯ್ಯಾ,
ನಿಮ್ಮ ಮಹಾನುಭಾವಿಗಳ ಸಂಗದಿಂದಲಾನು ಪರಮಸುಖಿಯಾದೆನಯ್ಯಾ.
ಸಂಗದಿಂದಲ್ಲದೆ ಅಗ್ನಿ ಹುಟ್ಟದು,
ಸಂಗದಿಂದಲ್ಲದೆ ಬೀಜ ಮೊಳೆದೋರದು,
ಸಂಗದಿಂದಲ್ಲದೆ ಹೂವಾಗದು.
ಸಂಗದಿಂದಲ್ಲದೆ ಸರ್ವಸುಖದೋರದು.
ಚೆನ್ನಮಲ್ಲಿಕಾರ್ಜುನಯ್ಯಾ,
ನಿಮ್ಮ ಮಹಾನುಭಾವಿಗಳ ಸಂಗದಿಂದಲಾನು ಪರಮಸುಖಿಯಾದೆನಯ್ಯಾ.