ಸಂಗನಬಸವಣ್ಣನ ಪಾದವ ಕಂಡೆನಾಗಿ
ಎನ್ನ ಅಂಗ ನಾಸ್ತಿಯಾಯಿತ್ತು.
ಚೆನ್ನಬಸವಣ್ಣನ ಪಾದವ ಕಂಡೆನಾಗಿ
ಎನ್ನ ಪ್ರಾಣ ಬಯಲಾಯಿತ್ತು.
ಪ್ರಭುವೆ, ನಿಮ್ಮ ಶ್ರೀಚರಣಕ್ಕೆ ಶರಣೆಂದೆನಾಗಿ
ಎನಗೆ ಅರಿವು ಸ್ವಾಯತವಾಯಿತ್ತು.
ಚೆನ್ನಮಲ್ಲಿಕಾರ್ಜುನಯ್ಯಾ,
ನಿಮ್ಮ ಶರಣರ ಕರುಣವ ಪಡೆದೆನಾಗಿ
ಎನಗಾವ ಜಂಜಡವೂ ಇಲ್ಲವಯ್ಯಾ ಪ್ರಭುವೆ.