ಸಜ್ಜನರ ಸಂಗದೊಳಗಿರಿಸೆನ್ನ ರಂಗ

ಸಜ್ಜನರ ಸಂಗದೊಳಗಿರಿಸೆನ್ನ ರಂಗ
ದುರ್ಜನರ ಸಂಗ ನಾನೊಲ್ಲೆ ಮಂಗಳಾಂಗ

ಕೂಡಿದ ಸಭೆಯಲಿ ಕುತ್ಸಿತವ ನುಡಿವನ ಸಂಗನಾಡಿನೊಳಗನ್ಯಾಯವ ಮಾಡುವನ ಸಂಗಬೇಡಿದರು ಕೊಡದಿರುವ ಕಡುಲೋಭಿಯ ಸಂಗಮೂಢ ಮೂರ್ಖರ ಸಂಗ ಬಲು ಭಂಗ ಎಲೊ ರಂಗ||1||

ಗುರು ಸತಿಗೆ ಪರಸತಿಗೆ ಎರಡು ಬಗೆವರ ಸಂಗಗುರು ನಿಂದೆ ಪರನಿಂದೆ ಮಾಡುವರ ಸಂಗಪರಹಿತಾರ್ಥದ ಧರ್ಮವರಿಯದವರ ಸಂಗಮರುಳ ಪಾಮರ ಸಂಗ ಬಲು ಭಂಗ ಎಲೊ ರಂಗ ||2||

ಆಗಮದ ಅನ್ವಯವನರಿಯದವನ ಸಂಗರೋಗದಲಿ ಆವಾಗಲು ಮುಲುಗುವನ ಸಂಗಕಾಗಿನೆಲೆಯಾದಿಕೇಶವನಂಘ್ರಿ ನೆನೆಯದಿಹಭಾಗವತರ ಸಂಗ ಬಲು ಭಂಗ ಎಲೊ ರಂಗ ||3||

Leave a Comment

Your email address will not be published. Required fields are marked *