ಸತ್ಯವಂತರ ಸಂಗವಿರಲು ತೀರ್ಥವ್ಯಾತಕೆನಿತ್ಯನಿಯಾದ ಮೇಲೆ ಚಿಂತೆಯಾತಕೆ
ತಾನು ಉಣ್ಣದ ಪರರಿಗಿಕ್ಕದ ಧನವಿದ್ಯಾತಕೆಮಾನ ಹೀನನಾಗಿ ಬಾಳ್ವ ಮನುಜನ್ಯಾತಕೆe್ಞÁನವಿಲ್ಲದೆ ನೂರು ಕಾಲ ಬದುಕಲ್ಯಾತಕೆಮಾನಿನಿಯ ತೊರೆದ ಮೇಲೆ ಭೋಗವ್ಯಾತಕೆ ||1||
ಮಾತು ಕೇಳದೆ ಮಲೆತು ನಡೆವ ಮಕ್ಕಳ್ಯಾತಕೆಪ್ರೀತಿಯಿಲ್ಲದೆ ಎಡೆಯಲಿಕ್ಕಿದ ಅನ್ನವ್ಯಾತಕೆನೀತಿಯರಿತು ನಡೆಯದಿರುವ ಬಂಟನ್ಯಾತಕೆಸೋತ ಹೆಣ್ಣಿಗೆ ಓತು ನಡೆಯದ ಪುರುಷನ್ಯಾತಕೆ ||2||
ಸನ್ನೆಯರಿತು ನಡೆಯದಿರುವ ಸತಿಯು ಯಾತಕೆಮನ್ನಣಿಂದ ನಡೆಸದಿರುವ ದೊರೆಯು ಯಾತಕೆಮುನ್ನ ಕೊಟ್ಟು ಪಡೆಯದಿನ್ನು ಬಯಸಲ್ಯಾತಕೆಚೆನ್ನ ಆದಿಕೇಶವನಲ್ಲದ ದೈವವ್ಯಾತಕೆ ||3||