ಸಾಕು ಸಾಕಿನ್ನು ಸಂಸಾರ ಸುಖವು

ಸಾಕು ಸಾಕಿನ್ನು ಸಂಸಾರ ಸುಖವು
ಶ್ರೀಕಾಂತ ನೀನೊಲಿದು ಕರುಣಿಸೈ ಹರಿಯೆ

ಉದಿಸಿದುವು ಪಂಚಭೂತಗಳಿಂದ ಓಷಧಿಗಳುಉದಿಸಿದುದು ಓಷಧಿಗಳಿಂದನ್ನವುಉದಿಸಿದುವು ಅನ್ನದಿಂ ಶುಕ್ಲ ಶೋಣಿತವೆರಡುಉದಿಸಿದುವು ಸ್ತ್ರೀ ಪುರುಷರಲ್ಲಿ ಹರಿಯೆ ||1||

ಸತಿಪುರುಷರೊಂದಾಗಿ ರತಿಕ್ರೀಡೆಗಳ ಮಾಡೆಪತನವಾದಿಂದ್ರಿಯವು ಹೊಲೆರುಧಿರವುಸತಿಯ ಉದರದೊಳೆರಡು ಏಕತ್ರ ಸಂಧಿಸುತಪುತಪುತನೆ ಮಾಸ ಪರಿಯಂತ ಹರಿಯೆ||2||

ಮಾಸವೆರಡರಲಿ ಶಿರ ಮಾಸ ಮೂರರಲಿ ಅಂಗಮಾಸ ನಾಲ್ಕರಲಿ ಚರ್ಮದ ಹೊದಿಕೆಮಾಸ ಐದಾರರಲಿ ನಖ ರೋಮ ನವರಂಧ್ರಮಾಸ ಏಳರಲಿ ಧಾತು ಹಸಿವು ತೃಷೆಯು ||3||

ತಿಂಗಳೆಂಟರಲಿ ಪೂರ್ವಾನುಭವ ಕರ್ಮಗಳಗುಂಗಿನಲಿ ನಾನಿಂತು ಭವಭವದೊಳುಅಂಗನೆಯರುದರದಲಿ ಮತ್ತೆಮತ್ತೆ ಬಂದುಭಂಗಪಡೆನೆಂದು ಧ್ಯಾನಿಸುತ ದಿನಗಳೆದೆ ||4||

ಇನಿತು ಗರ್ಭದೊಳು ನವ ಮಾಸ ಪರಿಯಂತರದಿತನು ಸಿಲುಕಿ ನರಕದಲಿ ಆಯಾಸಗೊಂಡುಘನ ಮರುತ ಯೋಗದಿಂ ನರಳುತಿಲ್ಲಿಗೆ ಬಂದುಜನಿಸುವಲ್ಲಿ ಮೃತಭಾವದಿಂದ ನೊಂದೆನೈ ಹರಿಯೆ ||5||

ಧರೆಯ ಮೇಲುದಿಸಿ ಬಹು ವಿಷ್ಣು ಮಾಯಕೆ ಸಿಲುಕಿಪರವಶದೊಳಿರಲು ನೀರಡಿಕೆಯಾಗಿಹೊರಳಿ ಗೋಳಿಡುತ ಕಣ್ದೆರೆದು ಹರಿಯನು ಮರೆವದುರಿತ ರೂಪದ ತನುವ ಧರಿಸಲಾರೆ||6||

ಶಿಶುತನದೊಳಗೆ ಸೊಳ್ಳೆ ನೊಣ ಮುಸುಕಿ ಅತ್ತಾಗಹಸಿದನಿವನೆಂದು ಹಾಲನೆ ಎರೆವರುಹಸಿವು ತೃಷೆಯಿಂದಳಲು ಹಾಡಿ ತೂಗುವರಾಗಪಶು ತೆರದಿ ಶಿಶುತನದೊಳಿರಲಾರೆ ಹರಿಯೆ ||7||

ನಡೆಯಲರಿಯದ ದುಃಖ ಮನಸಿನಲಿ ಬಯಸಿದುದನುಡಿಯಲರಿಯದ ದುಃಖ ವಿಷಯದಿಂದಅಡಿಯಿಡುತ ಮೆಲ್ಲನೇಳುತ ಬೀಳುತಲಿ ತೊದಲುನುಡಿವ ಬಾಲ್ಯದೊಳಿರಲಾರೆ ಹರಿಯೆ ||8||

ಬಾಲ್ಯದೊಳು ಕೆಲವು ದಿನ ಬರಿದೆ ಹೋಯಿತು ಹೊತ್ತುಗೋಳಿಡುತ ವಿದ್ಯೆ ಕರ್ಮಗಳ ಕಲಿತುಮೇಲೆ ಯೌವನದ ಉಬ್ಬಿನೊಳು ಮದುವೆಯಾಗಿಬಾಲೆಯರ ಬಯಸಿ ಮರುಳಾದೆ ಹರಿಯೆ||9||

ಜ್ವರದ ಮೇಲತಿಸಾರ ಬಂದವೊಲು ಯೌವನದಿತರುಣಿಯೊಡನಾಟ ಕೂಟದ ವಿಷಯದಿತರುಣಿ ಸುತರ್ಗನ್ನ ವಸ್ತ್ರಾಭರಣವೆನುತಪರರ ಸೇವೆಯಲಿ ಘಾಡ ನೊಂದೆ ಹರಿಯೆ||10||

ನೆತ್ತರು ತೊಗಲು ಮೂಳೆ ಮಜ್ಜೆ ಮಾಂಸದ ಹುತ್ತುಜೊತೆಗಿಂದ್ರಿಯಗಳ ರೋಗ ರುಜಿನದಲಿಮತ್ತೆ ಕಾಲನ ಬಾಯ ತುತ್ತಾಗುವ ಕರ್ಮದಕತ್ತಲೆಯೊಳೀ ದೇಹ ಕರಡಾಯಿತು ||11||

ದಿಟ್ಟತನದಲಿ ಗಳಿಸಿ ತರುವಾಗ ಸತಿಸುತರುಕಟ್ಟಿ ಕಾದಿಹರು, ಮುಪ್ಪಡಿಸಿದಾಗತಟ್ಟನೆ ಬಲು ಕೆಟ್ಟ ನುಡಿಗಳಲಿ ಬೈಯುತ್ತಕಟ್ಟಕಡೆಗೆ ಕಣ್ಣೆತ್ತಿ ನೋಡರೈ ಹರಿಯೆ||12||

ಕಟ್ಟುನಿಟ್ಟಿನ ಭಾರಿ ಮೂಗುಬ್ಬಸದಿ ನೊಂದುಕಟ್ಟಳೆಯ ದಿನ ತುಂಬಿ ಮೃತವಾಗಲುಕುಟ್ಟಿಕೊಂಡಳಲುತ್ತ ಹೋಯೆಂದು ಬಂಧುಗಳುಮುಟ್ಟರು ಹೆಣನೆಂದು ದೂರವಿಹರು ||13||

ಸತ್ತ ಹೆಣಕಳಲೇಕೆ ಎಂದು ನೆಂಟರು ಸುಯ್ದುಹೊತ್ತು ಹೋಯಿತೆನ್ನುತ ಕಸಕೆ ಕಡೆಯಾಗಿಹೊತ್ತು ಕೊಂಡಗ್ನಿಯಲಿ ತನುವನಿದ ಬಿಸಡುವರುಮತ್ತೆ ಬುವಿಯಲಿ ಜನಿಸಲಾರೆ ಹರಿಯೆ ||14||

ಇನ್ನು ಈ ಪರಿಪರಿಯ ಯೋನಿ ಮುಖದಲಿ ಬಂದುಬನ್ನವನು ಪಡಲಾರೆ ಭವಭವದೊಳುಜನನ ಮರಣಾದಿ ಸರ್ವ ಕ್ಲೇಶಗಳ ಪರಿಹರಿಸಿಸನ್ಮತಿಯೊಳಿರಿಸೆನ್ನ ಆದಿಕೇಶವರಾಯ ||15||

Leave a Comment

Your email address will not be published. Required fields are marked *