ಸಾರಿ ದೂರಿ ಹೇಳುತೇನೆ ಕೆಟ್ಟಿ ಕಂಡ್ಯ ಬಡ್ಡಿ ಮನವೆ
ದೂರೋ ಬುದ್ಧಿ ಮಾಡಬೇಡ ಕೈಯೊಳಿಕೋ ಕಡ್ಡಿನಿನ್ನ ಕೈಯೊಳಿಕೋ ಕಡ್ಡಿ
ಕೋಪವನ್ನೆ ಮಾಡದಿರು ಪಾಪಕೆ ಗುರಿಯಾಗದಿರುಶ್ರೀಪತಿಯ ನಾಮವನು ನೀ ಪಠಿಸುತಲಿರು ಮನವೆ ||1||
ಅಷ್ಟಮದದಿ ಮೆರೆಯದಿರು ನಷ್ಟಕೆ ಗುರಿಯಾಗದಿರುದುಷ್ಟಸಂಗವನ್ನು ಮಾಡಿ ಭ್ರಷ್ಟನಾಗಬೇಡ ಮನವೆ ||2||
ಸಿರಿಯ ಮೆಚ್ಚಿ ಮೆರೆಯದಿರು ಬರಿದೆ ಹೊತ್ತ ಕಳೆಯದಿರುಪರರ ನಿಂದೆಯನ್ನು ಮಾಡಿ ನರಕಿಯಾಗಬೇಡ ಮನವೆ ||3||
ಕಾಯವನ್ನು ನಂಬದಿರು ಮಾಯಕೆ ಮರುಳಾಗದಿರುಸ್ತ್ರೀಯರನ್ನು ಕಂಡು ನೀನು ಬಯಸದಿರು ಮರುಳು ಮನವೆ ||4||
ನಿನ್ನ ನಿಜವ ನಂಬದಿರು ಉನ್ನತಾಸೆ ಮಾಡದಿರುಚೆನ್ನಾದಿಕೇಶವನ ಪಾದವನ್ನು ನೀನು ನಂಬು ಮನವೆ ||5||