ಸೈಯವ್ವ ಇದು ಸೈಯೆ, ಗೋಪಿ, ಸೈಯವ್ವ ಇದು ಸೈಯೆ
ಸೈಯೆ ಗೋಪಿ, ನಿನ್ನ ಮಗರಾಮನಿಗೆ ಒಳ್ಳೆ ಬುದ್ಧಿ ಕಲಿಸಿದ್ದೀಯೆ
ಸಂಜೆಯ ವೇಳೆಗೆ ಬಂದು – ಸಟೆಯಲ್ಲ – ಮನೆಯ ಒಳಗಡೆ ನಿಂದುಕುಂಜರಗಮನೆ ಬಾರೆಂದು ಎನ್ನ ಮುಂಗುರುಳ ತಿದ್ದಿದಗಂಜಿ ಶಲ್ಯವ ಎನಗೆ ಮುಸುಕಿಟ್ಟು ಮುದ್ದಾಡಿ ಕಡೆಗೆಕಂಜಲೋಚನೆ ಕುಚದ ಗಂಟು ಬಿಚ್ಚೆಂದ ನೋಡು ||1||
ಬಿಟ್ಟ ಮಂಡೆಯಲಿ ಗಂಡ ಮೈಮರೆತು ಮಲಗಿಹುದ ಕಂಡುಜುಟ್ಟನ್ನು ಬಿಚ್ಚಿ ಮಂಚದ ನುಲಿಗೆ ಬಿಗಿದು ಕಟ್ಟಿದಕೊಟ್ಟಿಗೆ ಸುಡುತಿದೆ ಏಳೆಂದು ಬೊಬ್ಬೆಯಿಟ್ಟುದ ಕೇಳಿಥಟ್ಟನೇಳಲು ಗಂಡ, ಜುಟ್ಟು ಕಿತ್ತು ಹೋಯಿತಮ್ಮ||2||
ಅಡವಿ ಜಟ್ಟಿಂಗನ ಮಾಡಲಿಕೆ ಒಳ್ಳೆ ಸಡಗರ ಸಂಭ್ರಮದಿಂದಹೆಡಗೆ ತುಂಬ ಹೋಳಿಗೆ ಮಾಡಿ ಕೊಡ ನೀರು ತರಲು ಹೋದೆನೆಕಡೆಗೊಂದು ಹೋಳಿಗೆ ಬಿಡದೆ ಕೊಡದುಪ್ಪ ಹಾಲ್ಮೊಸರು ಪಾಯಸಕಡು ಫಟಿಂಗ ತುಡುಗು ತಿಂದು ಮೀಸಲಳಿದು ಎಡೆಗೆಡಿಸಿ ಹೋದನೆ ||3||
ಊರೊಳಿಂತಾಯ್ತೆಂದು ಸಾರಿದೆವೆ ನಾರೇರುಅಡವಿಯಲಿ ಕೂಡಿದೆವೆ ಹಲವಾರು ಹೆಂಗಸರುನೂರಾರು ಗೆಳತೇರು ಉಳಿದ ಹಾಲನು ಮಾರಿದಾರಿ ಹಿಡಿದು ಬರುವಾಗೊಂದು ಕೊಳವ ಕಂಡೆವೆ ನೊಡು ||4||
ಓರಗೆ ಹೆಂಗಳು ನಾವು ನೀರಾಟವಾಡಲಿಕೆಸೀರೆ ಕುಬಸವ ದಡದೊಳಿಟ್ಟು ಕೊಳಕೆ ಧುಮುಕಿದೆವೆಚೋರ ನಿನ್ನ ಮಗ ಸೀರೆಕುಬಸವನೆಲ್ಲ ತಕ್ಕೊಂಡು ಹೋಗಿತೋರದುಂಚ ಕಡಹದ ಮರನೇರಿ ನೋಡುತ ಕುಂತನೆ ||5||
ನೆಟ್ಟನೆ ನೀರಾಟವಾಡಿ ನಾಲ್ಕೂ ದಿಕ್ಕಿನಲಿ ನಾವು ಅಡರಿದೆವೆಇಟ್ಟಲ್ಲಿ ಸೀರೆಕುಬಸಗಳಿಲ್ಲ ಕೆಟ್ಟೆವಯ್ಯಯ್ಯೋಕಿಟ್ಟನ ಕೈಚಳಕವೆಂದು ನಾವಷ್ಟದಿಕ್ಕುಗಳ ನೋಡಿದೆವೆತುಟ್ಟತುದಿ ಕೊಂಬೆಯಲಿ ಕುಂತಿರುವ ಪುಟ್ಟನ್ನ ಕಂಡೆವೆ ||6||
ಮುಂದೆ ಹಸ್ತದಿ ಮುಚ್ಚಿಗೊಂಡು ಕೃಷ್ಣನಿಗೆ ಗೋಗರೆದು ಕೇಳಲುವಂದನೆ ಮಾಡಿದರೆ ನಿಮಗೆ ಸೀರೆ ಕುಬಸವ ಕೊಡುವೆನೆಂದಒಂದು ಕರದಿ ಮುಗಿವೆವೆಂದರೆ ಎರಡು ಕರದಿ ಮುಗಿಯಿರೆಂದಬಂಧನಕ್ಕೊಳಗಾದೆವೆಂದು ವಿಧಿಯಿಲ್ಲದೆ ಮುಗಿದೆವೆ ||7||
ಪುಷ್ಪಗಂಧಿಯರೆ ಒಪ್ಪಿತವಾಗಲಿಲ್ಲ ನನ್ನ ಮನಕೆಚಪ್ಪಾಳೆ ಇಕ್ಕುತ ಮರದ ಸುತ್ತ ತಿರುಗಿರೆಂದತಪ್ಪದು ಎಷ್ಟೊತ್ತಾದರು ಬಿಡನೆಂದು ಜಯಜಯವೆನುತಚಪ್ಪಾಳೆ ಇಕ್ಕುತ ಮರದ ಸುತ್ತಲೂ ತಿರುಗಿದೆವೆ||8||
ಪಗಡೆಕಾಯಿ ಕುಚದ ದಗಡಿಯರೆ ಪುಗಡಿ ಹಾಕಿರಿ ಎನ್ನೆದುರುತೆಗೆದು ಕೊಡುವೆ ನಿಮ್ಮ ವಸ್ತ್ರಗಳ ಬಗೆಬಗೆಯಿಂದಜಗದೊಳು ನಗೆಗೇಡಾದೆವು ಇನ್ನು ನುಡಿದು ಫಲವಿಲ್ಲೆಂದುಪುಗಡಿ ಹಾಕಿದೆವೆ ನಾವು ಛೀ ಛೀ ಎನ್ನುತಲಿ ||9||
ಕಡೆಯಾಟ ಕಮಲನೇತ್ರೆಯರೆ ಎಡೆಯಾಗಿ ಹೋಗಿ ನಿಲ್ಲಿರಿಓಡಿಬಂದರೊಂಟಿಯಾಗಿ ಹಿಡಿದು ನೋಡಿ ಕೊಡುವೆ ಎಂದಕೋಡಗ ಕೊರವಂಗೆ ಸಿಕ್ಕಿ ಆಡಿದಂತೆ ನಾವಾಡಿದೆವೆಓಡಿ ಬಂದೊಬ್ಬೊಬ್ಬರಿಗೂ ಹಿಡಿದು ಸವರಿ ವಸ್ತ್ರವನಿತ್ತನೆ ||10||
ತಂಡತಂಡದ ನಮಗೆ ಬಣ್ಣಬಣ್ಣದ ಬಳೆಯನಿಟ್ಟುಮಂಡೆ ಬಾಚಿ ಕುರುಳ ತಿದ್ದಿ ಕುಂಕುಮವಿಟ್ಟನೆಪುಂಡ ನಿನ್ನಣುಗ ನೆಲೆಯಾದಿಕೇಶವರಾಯಬಂಡು ಮಾಡಿ ಬಳಲಿಸಿ ಕೊನೆಗೆ ರಮಿಸಿ ಕಳಿಸಿಕೊಟ್ಟನೆ ||11||