ಹಣ್ಣು ಕೊಂಬುವ ಬನ್ನಿರಿ

ಹಣ್ಣು ಕೊಂಬುವ ಬನ್ನಿರಿ – ಹರಿದಾಸರುಹಣ್ಣು ಕೊಂಬುವ ಬನ್ನಿರಿ
ಚೆನ್ನ ಬಾಲಕೃಷ್ಣನೆಂಬಕನ್ನೆಗೊನೆ ಬಾಳೆಹಣ್ಣು

ಸುತ್ತೇಳು ಲೋಕದಿ ಸುರರು ಬಿತ್ತಿದ ಹಣ್ಣುಭಕ್ತರ ಬಾಯೊಳು ನೆನೆವ ಹಣ್ಣುಅರ್ತಿಯುಳ್ಳವರೆಲ್ಲ ಕೊಳ್ಳಿ ಬೇಕಾದರೆನಿತ್ಯ ಮಾಧವನೆಂಬ ಅಚ್ಚ ಮಾವಿನ ಹಣ್ಣು ||1||

ಅಜನ ಪಡೆದ ಹಣ್ಣು ಗಜವ ಕಾಯ್ದ ಹಣ್ಣುನಿಜಮುನಿಗಳಿಗೆ ತೋರಿಸಿದ ಹಣ್ಣುತ್ರಿಜಗವಂದಿತ ಪಾಲ್ಗಡಲೊಡೆಯನ ಹಣ್ಣುಸುಜನ ಭಕ್ತರೆಲ್ಲ ಕೊಳ್ಳ ಬನ್ನಿರಿ ಹಣ್ಣು ||2||

ತುರುವ ಕಾಯ್ದ ಹಣ್ಣು ಉರಗನ ತುಳಿದ ಹಣ್ಣುಕರೆದರೆ ಕಂಬದೊಳು ಓಯೆಂಬ ಹಣ್ಣುಮರುಗುವ ಧ್ರುವನಿಗೆ ಪಟ್ಟಗಟ್ಟಿದ ಹಣ್ಣುಕರುಣಾಳು ಕಾಗಿನೆಲೆಯಾದಿಕೇಶವ ಹಣ್ಣು ||3||

Leave a Comment

Your email address will not be published. Required fields are marked *