ಹ್ಯಾಂಗೆ ನೀ ದಾಸನಾದೆ ಪ್ರಾಣಿ
ಹ್ಯಾಂಗೆ ನೀ ದಾಸನಾದೆ ಹೀಂಗೆ ಸಂಸಾರದೊಳುಮಂಗನಂದದಲಿ ಭವ ಭಂಗವ ಪಡುವವನು
ಆಸೆಯ ಬಿಡಲಿಲ್ಲ ಕಾಸು ಗಳಿಸುವೆಯಲ್ಲದೋಷಕ್ಕೆ ಗುರಿಯಾಗಿ ಹೇಸಿಕೆಯೊಳು ಬಿದ್ದು ||1||
ತನುವು ತನ್ನದು ಎಂದು ತನಯ ಮಾನಿನಿಯರೆತನಗೆ ಗತಿಯೆಂದು ನಂಬಿರುವ ಮೂಢನೆ ||2||
ಕಾಲನ ದೂತರು ಕರುಣಸಂಪನ್ನರೆಕಾಲ ವ್ಯರ್ಥದಿ ಕಳೆವ ಕೀಳು ಬುದ್ಧಿಯ ಪ್ರಾಣಿ||3||
ತಲೆ ಹುಳಿತ ನಾಯಂತೆ ಹಲವು ಬೀದಿಯ ತಿರುಗಿಗೆಲುವಿನಿಂದಲಿ ಮೂಲ ಮಲವನಳಿಯದೆ||4||
ಉದರಪೋಷಣೆಗಾಗಿ ಅಧಮರ ಯಾಚಿಸುತಮದಗರ್ವವೆಂಬುವುದ ಬದಿಯಲ್ಲಿ ಇಟುಗೊಂಡು ||5||
ಹಿರಿಯರ ನಿಂದಿಸಿ ಹರಿದಾಸನೆನಿಸಿದೆಗುರುಮಂತ್ರವರಿಯದ ಮರುಳು ಪಾಮರ ಪ್ರಾಣಿ||6||
ಕಾಲುಗೆಜ್ಜೆಯ ಕಟ್ಟಿ ಮೇಲೆ ಕರತಾಳ ತಟ್ಟಿಶ್ರೀಲೋಲನ ಗುಣ ಪೊಗಳಿ ನಟಿಸದಲೆ ||7||
ಕುಣಿಕುಣಿದು ಮನದಣಿದು ಮಣಿದು ಸಜ್ಜನ ಪದಕೆಅಣಿಮಾದಿ ಅಷ್ಟಸಿದ್ಧಿಯನು ಕೈಗೊಳ್ಳದಲೆ ||8||
ವೇದಶಾಸ್ತ್ರಗಳನು ಮೋದದಿಂದೋದದೆಬಾದರಾಯಣಕೃತ ಭಾಗವತ ಕೇಳದೆ ||9||
ಕಟ್ಟಿ ಕೈ ಪರರಲಿ ಹೊಟ್ಟೆಗೋಸುಗವೆ ಕಂ-ಗೆಟ್ಟು ಯಾಚಿಸುವ ಭ್ರಷ್ಟಪ್ರಾಣಿಯೆ ನೀನು ||10||
ನೇಮದಿ ಉಪವಾಸ ಆ ಮಹಾ ಏಕಾದಶಿಕಾಮಜನಕನನು ಪ್ರೇಮದಿ ಸ್ಮರಿಸಿದೆ||11||
ಏಸುದಿನ ಬದುಕಿದರು ಸೂಸುವ ಪಾಪವಈಸಿ ದಾಟದೆ ಕಾಸುವೀಸಕೆ ಬಾಳಿದವ ||12||
ಅಂಗಳದೊಳಡಗಿಪ್ಪ ಸುಮಂಗಳ ಮೂರ್ತಿ ಪಾದಂಗಳ ಮನದಲಿ ಹಿಂಗದೆ ಭಜಿಸದೆ ||13||
ಬತ್ತಿ ಹೋಯಿತು ನದಿ ಬಿತ್ತದೆ ಬೆಳೆಯದೆಅತ್ತರೆ ಬಹುದೇನೊ ಉತ್ತಮ ಫಲ ಸೂಸಿ||14||
ಆಡುವ ಮಕ್ಕಳ ಕೈಗೆ ನೀಡದೆ ಕಡಲೆಯಬೇಡಿದರೆ ಕೊಟ್ಟು ಕೂಡಿ ಆಡದವನು ನೀ ||15||
ಶೃಂಗಾರ ಬಯಸುತ ಬಂಗಾರದೊಡವೆಯಹಿಂಗದೆ ಶ್ರೀ ತುಲಸಿಯ ರಂಗಗರ್ಪಿಸದೆ ||16||
ಸುತ್ತ ಕತ್ತಲೆ ಚಿಂತೆ ಮತ್ತೆ ಭಯದ ಭ್ರಾಂತಿಚಿತ್ತಜನಯ್ಯನು ದೊರೆವ ಬಗೆ ಕಾಣದೆ ||17||
ಡಂಬವ ಮಾಡಿಕೊಂಡು ತುಂಬ ಪಾಪ ಒಳಗೆಹಂಬಲಿಸಿದರಿನ್ನು ಬೆಂಬಲಕಾರುಂಟು ||18||
ದುಂಡು ನಾಮವ ಬಳಿದು ಭಂಡತನದಲಿ ಜಗದಿದಂಡಿಗೆ ಬೆತ್ತ ಪಿಡಿದು ಹೆಂಡಿರ ಕಾಯ್ವನೆ ||19||
ಹಕ್ಕಿವಾಹನನ ಗುಣ ಲೆಕ್ಕಿಸಿ ಪೊಗಳದೆಬೆಕ್ಕಸ ಬೆರಗಾಗಿ ಅಕ್ಕಿಗೆ ತಿರುಗುವವ ||20||
ಭೋಗಿಶಯನನ ಪಾದ ರಾಗದಿ ಭಜಿಸದೆಕಾಗಿನೆಲೆಯಾದಿಕೇಶವರಾಯನೆನದೆ||21||