ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಪಾವನವು,

ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಪಾವನವು,
ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಕಾರಣವು,
ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಸಾಧನವು,
ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಸಿದ್ಧಿ,
ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಪಾಪಕ್ಷಯವು.
ಅಯ್ಯಾ ನಿಮ್ಮ ಪಂಚವಕ್ತ್ರಂಗಳೆ ಪಂಚಮುಖದ ರುದ್ರಾಕ್ಷಿಗಳಾದವಾಗಿ,
ಅಯ್ಯಾ ಕೂಡಲಸಂಗಮದೇವಯ್ಯಾ,
ಎನ್ನ ಮುಕ್ತಿಪಥಕ್ಕೆ ಶ್ರೀಮಹಾರುದ್ರಾಕ್ಷಿಯೆ ಸಾಧನವಯ್ಯಾ.

Leave a Comment

Your email address will not be published. Required fields are marked *