ಅಯ್ಯಾ, ನೀನೆನ್ನ ಮೊರೆಯನಾಲಿಸಿದಡಾಲಿಸು,
ಆಲಿಸದಿರ್ದಡೆ ಮಾಣು.
ಅಯ್ಯಾ, ನೀನೆನ್ನ ದುಃಖವ ನೋಡಿದಡೆ ನೋಡು,
ನೋಡದಿರ್ದಡೆ ಮಾಣು.
ನಿನಗಿದು ವಿಧಿಯೆ ?
ನೀನೊಲ್ಲದಡೆ ಆನೊಲಿಸುವ ಪರಿಯೆಂತಯ್ಯಾ ?
ಮನವೆಳಸಿ ಮಾರುವೋಗಿ ಮರೆವೊಕ್ಕಡ
ಕೊಂಬ ಪರಿಯೆಂತಯ್ಯಾ ಚೆನ್ನಮಲ್ಲಿಕಾರ್ಜುನಾ ?ಆಲಿಸದಿರ್ದಡೆ ಮಾಣು.
ಅಯ್ಯಾ, ನೀನೆನ್ನ ದುಃಖವ ನೋಡಿದಡೆ ನೋಡು,
ನೋಡದಿರ್ದಡೆ ಮಾಣು.
ನಿನಗಿದು ವಿಧಿಯೆ ?
ನೀನೊಲ್ಲದಡೆ ಆನೊಲಿಸುವ ಪರಿಯೆಂತಯ್ಯಾ ?
ಮನವೆಳಸಿ ಮಾರುವೋಗಿ ಮರೆವೊಕ್ಕಡೆಕೊಂಬ ಪರಿಯೆಂತಯ್ಯಾ ಚೆನ್ನಮಲ್ಲಿಕಾರ್ಜುನಾ ?