ಆದಿ ಅನಾದಿಯೆನ್ನದೆ ಬಸವಣ್ಣ ಗಣಮೇಳಾಪವಾಗಿ

ಆದಿ ಅನಾದಿಯೆನ್ನದೆ ಬಸವಣ್ಣ ಗಣಮೇಳಾಪವಾಗಿ
ಅನಂತ ಯುಗಂಗಳಲ್ಲಿಯೂ ಸಕಲ ಲೋಕದೊಳು
ಚರಿಸುತ್ತಿಪ್ಪ ಸುಳುಹನರಿಯದೆ

ಸಕಲ ನಿಃಕಲರೆಲ್ಲ ಭ್ರಮೆಗೊಂಡು ಬೀಳುತ್ತೇಳುತ್ತಿರ್ದರು.
ಇವರೆಲ್ಲರ ಮುಂದೆ ಆ ಗಣಂಗಳ ನಾನರಿದು ಬದುಕಿದೆನು
ಕಾಣಾ ಶ್ರೀಶೈಲಚೆನ್ನಮಲ್ಲಿಕಾರ್ಜುನಾ.

Leave a Comment

Your email address will not be published. Required fields are marked *