ಆಶೆಯಾಮಿಷವಳಿದು, ಹುಸಿ ವಿಷಯಂಗಳೆಲ್ಲ ಹಿಂಗಿ,
ಸಂಶಯ ಸಂಬಂಧ ವಿಸಂಬಂಧವಾಯಿತ್ತು ನೋಡಾ.
ಎನ್ನ ಮನದೊಳಗೆ ಘನಪರಿಣಾಮವ ಕಂಡು
ಮನ ಮಗ್ನವಾಯಿತ್ತಯ್ಯಾ.
ಚೆನ್ನಮಲ್ಲಿಕಾರ್ಜುನಾ, ನಿಮ್ಮ ಶರಣ ಪ್ರಭುದೇವರ
ಕರುಣದಿಂದ ಬದುಕಿದೆನಯ್ಯಾ.
ಆಶೆಯಾಮಿಷವಳಿದು, ಹುಸಿ ವಿಷಯಂಗಳೆಲ್ಲ ಹಿಂಗಿ,
ಸಂಶಯ ಸಂಬಂಧ ವಿಸಂಬಂಧವಾಯಿತ್ತು ನೋಡಾ.
ಎನ್ನ ಮನದೊಳಗೆ ಘನಪರಿಣಾಮವ ಕಂಡು
ಮನ ಮಗ್ನವಾಯಿತ್ತಯ್ಯಾ.
ಚೆನ್ನಮಲ್ಲಿಕಾರ್ಜುನಾ, ನಿಮ್ಮ ಶರಣ ಪ್ರಭುದೇವರ
ಕರುಣದಿಂದ ಬದುಕಿದೆನಯ್ಯಾ.