ಇಂದು ಬನ್ನಿ ಇಂದಿರೇಶಾ ಇಂದುವಾರದಲಿ ಬಲು

ಇಂದು ಬನ್ನಿ ಇಂದಿರೇಶಾ ಇಂದುವಾರದಲಿ ಬಲು |
ಅಂದದಿಂದ ಮೆರೆವನಂದವ ನೋಡಾ

ಮುತ್ತಿನ ಕಿರೀಟ ಮೇಲೆ ಸುತ್ತಿದ ಲತೆ ತಳಲು |
ರತ್ನಗಂಬಳಿ ಕಲ್ಲಿಯ ಬುತ್ತಿ ಪೆಗಲೂ ||
ತೂತ್ತುತೂರಿ ಎಂದು ಸ್ವರ | ವೆತ್ತಿ ಊದುವ ಕೊಳಲು |
ಉತ್ತಮ ಶೋಕ್ಲವನು ಮೆರೆಯುತ್ತಲಿಪ್ಪುದು ||1||

ಉಂಗುರಗೂದಲು ಪುಬ್ಬು ಸಿಂಗಾಡಿ ಅಂದದಿ ಒಪ್ಪೆ |
ಅಂಗಾರ ಕಂಕಣ ಮಂಗಳಾಂಗ ನಿಸ್ಸಂಗ |
ರಂಗ ತುಂಗ ಮಹಿಮ ತಾರಂಗ ಅಂಗುಲಿಲಿ ರತ್ನ |
ದುಂಗುರವ ಯಿಟ್ಟ ಸುಖಂಗಳ ನೋಡಾ ||2||

ಉಂಗುರವ ನಡು ಮೇಲು ಕಂಗಳ ಕುಡಿನೋಟ |
ಗೋಪಾಂಗನೇರ ಮನಕೆ ಮೋಹಂಗಳ ತೋರೆ |
ಅಂಗಜನ್ನೆನೆಸಿ ತಾಪಂಗಳು ವೆಗ್ಗಳದಿಂದ |
ಹಂಗೀಗರಾಗೆ ನಗುವ ಗಂಗಾಜನಕ ||3||

ಲೋಕ ಬೆಲೆಗೊಂಬ ಅಲೌಕೀಕ ಮಣಿನಾಸದಲ್ಲಿ |
ರಾಕಾಬ್ಜಾನಂದದಿ ಮೊಗಾನೇಕ ಲೋಕೇಳಾ |
ನಾಕಾಜನಾದಿಗೆ ನಿತ್ಯ ಬೇಕೆಂದು ಜಪಿಸಲು
ದೊರಕದ ದೊಂಬಲು ಬಾ ಯದುಕುಲಾಂಬರಾ||4||

ತೂಗುವ ಕುಂಡಲ ಕರ್ಣ ಶ್ರೀಗಂಧ ಪೂಸಿದ ವಕ್ಷ |
ಪೂಗೊಂಚಲು ಸಣ್ಣನಾಮ ಆ ಗೆಜ್ಜೆಧ್ವನಿ |
ಆಗಮನ ಸೋಲಿಸೆ ನಾನಾ ಭೋಗಾದಲ್ಲಿಯಿಪ್ಪ | ಮಧ್ವ |
ಯೋಗಿಪ್ರಿಯಾ ವಿಜಯವಿಠ್ಠಲಾ ಗುಣನಿಧಿ ||5||

Leave a Comment

Your email address will not be published. Required fields are marked *