ಎನ್ನ ನುಡಿ ಪುಸಿಯಲ್ಲ ಈ ಜಗದೊಳು 

ಎನ್ನ ನುಡಿ ಪುಸಿಯಲ್ಲ ಈ ಜಗದೊಳು

ಅರವಿಂದವಿಲ್ಲದಿಹ ಕೊಳವು ತಾ ಕಂಗಳವುಹರಿಣಾಂಕನಿಲ್ಲದಿಹ ಇರುಳು ಮರುಳುಸ್ವರಭೇದವಿಲ್ಲದಿಹ ಸಂಗೀತವಿಂಗೀತಸರಸವಿಲ್ಲದಿಹ ಸತಿಯ ಭೋಗ ತನುರೋಗ ||1||

ಪಂಥ ಪಾಡುಗಳನರಿಯದ ಬಂಟನವ ತುಂಟಅಂತರವರಿಯದಾ ವೇಶಿ ಹೇಸಿದಂತಿಯಿಲ್ಲದ ಅರಸು ಮುರಿದ ಕಾಲಿನ ಗೊರಸುಅಂತಸ್ಥವಿಲ್ಲದ ಪ್ರಧಾನಿ ಮದ್ಯಪಾನಿ||2||

ಮಾಗಿಯಲಿ ಸತಿಯನಗಲಿದ ಕಾಂತನವ ಭ್ರಾಂತಪೂಗಣೆಯ ಗೆಲಿಯದಿಹ ನರ ಗೋಖುರಭೋಗಿಸದೆ ಇಹಪರಕೆ ಗಳಿಸಿದರ್ಥ ಅಪಾರ್ಥಕಾಗಿನೆಲೆಯಾದಿಕೇಶವನ ಭಕ್ತ ಮುಕ್ತ ||3||

Leave a Comment

Your email address will not be published. Required fields are marked *