ಎಲ್ಲಿಂದ ಬಂದೆ ಮುಂದೆತ್ತ ಪಯಣಇಲ್ಲಿ ನಿನಗೆಷ್ಟು ದಿನವಾಲಸ್ಯ ಮರುಳೆ
ಮಾತೆಯುದರದೊಳು ನವಮಾಸ ಮಲಮೂತ್ರದೊಳುಯಾತನೆಯ ಯೋನಿ ಮುಖ ಮಾರ್ಗವಿಡಿದುಭೂತಳಕೆ ಬಂದ ಹದನೇನ ತೀರಿಸಿಕೊಂಡೆಜಾತಿ ಯಾವುದು ನಿನ್ನ ಹೆಸರೇನು ಮರುಳೆ||1||
ಮುಂದಾವ ಪಥವ ಸೇರುವೆ ಮರುಳೆ, ಸಾಕಿನ್ನುಹಿಂದೆ ನೆರವಾಗಿ ನಿಂತಾಪ್ತರುಂಟೆಒಂದುಗೂಡಿದ ಪತ್ನಿ ಸುತರೆಲ್ಲ ವರ್ಜಿಪರುನಿಂದು ಮಾತಾಡು ಬರಿದೆ ಬಳಲಿದೆ ಮರುಳೆ|| 2||
ಬರವಿದೇತಕೆ ನಿನ್ನ ಸ್ಥಳವೆಲ್ಲಿ ನೆಲೆಗೊಂಡುಇರುವ ಮಂದಿರವಾವುದದನೆನಗೆ ಪೇಳೊಧರೆಯೊಳಗೆ ವರಕಾಗಿನೆಲೆಯಾದಿಕೇಶವನಸಿರಿ ಚರಣಕಮಲವನು ನೆರೆನಂಬಿ ಸುಖಿಸೊ||3||