ಒಂದೇ ನಾಮದಲಡಗಿದವೊ ಅಡಗಿದವೋ
ನಂದದಿಂದುಸುರುವ ಅಖಿಳ ವೇದಗಳು
ಒಂದೇ ನಾಮವೆ ಪ್ರಹಲ್ಲಾದನ್ನ ರಕ್ಷಿಸಿತು
ಒಂದೇ ನಾಮವೆ ಅಜಾಮಿಳಗೆ ವೊಲಿದಿತು
ತಂದೆ ತಾಯ ಬಿಟ್ಟ ಕಂದ ಧ್ರುವರಾಯಗೆ ಆ
ನಂದ ಪದವಿಯಿತ್ತ ಅದ್ಭುತ ಮಹಿಮೆಯು ||1||
ಮಚ್ಛಾದ್ಯನಂತಾವತಾರಾ
ಸ್ವಚ್ಛ ಅಷ್ಟಾದಶ ಪುರಾಣ ಅಮೃತದ ಸಾರಾ
ಕಚ್ಛಪ ತ್ರಿಜಗಕೆ ಆಧಾರ ತನ್ನ
ಸ್ವೇಚ್ಛೆಯಿಂದಲಿ ತಾ ಮಾಡೋ ವ್ಯಾಪಾರಾ ||2||
ಒಬ್ಬರಿಂದಲಿ ತನಗಿಲ್ಲ ತಾ
ನೊಬ್ಬನೆ ಜೀವರ ರಕ್ಷಿಪನೆಲ್ಲಾ
ಕಬ್ಬುಬಿಲ್ಲಿನ ಪಿತ ವಿಜಯವಿಠ್ಠಲರೇಯ- ವೈ
ದರ್ಭೆಯ ರಮಣನ ಸುಗುಣಗಳೆಲ್ಲಾ ||3||