ಗಂಗೆಯೊಡನಾಡಿದ ಘಟ್ಟ ಬೆಟ್ಟಂಗಳು ಕೆಟ್ಟ ಕೇಡ ನೋಡಿರಯ್ಯಾ.
ಅಗ್ನಿಯೊಡನಾಡಿದ ಕಾಷ್ಠಂಗಳು ಕೆಟ್ಟ ಕೇಡ ನೋಡಿರಯ್ಯಾ.
ಜ್ಯೋತಿಯೊಡನಾಡಿದ ಕತ್ತಲೆ ಕೆಟ್ಟ ಕೇಡ ನೋಡಿರಯ್ಯಾ.
e್ಞನಿಯೊಡನಾಡಿದ ಅe್ಞನಿ ಕೆಟ್ಟ ಕೇಡ ನೋಡಿರಯ್ಯಾ.
ಎಲೆ ಪರಶಿವಮೂರ್ತಿ ಹರನೆ, ನಿಮ್ಮ ಜಂಗಮಲಿಂಗದೊಡನಾಡಿ
ಎನ್ನ ಭವಾದಿ ಭವಂಗಳು ಕೆಟ್ಟ ಕೇಡ ನೋಡಾ, ಚೆನ್ನಮಲ್ಲಿಕಾರ್ಜುನಾ