ಗಂಡ ನೀನು ಹೆಂಡತಿಯಾನು ಮತ್ತೊಬ್ಬರಿಲ್ಲಯ್ಯಾ.

ಗಂಡ ನೀನು ಹೆಂಡತಿಯಾನು ಮತ್ತೊಬ್ಬರಿಲ್ಲಯ್ಯಾ.
ನಿನ್ನ ಬೆಂಬಳಿಯಲಾನು ಮೆಚ್ಚಿಬಂದೆ.
ಕಂಡಕಂಡವರೆಲ್ಲ ಬಲುಹಿಂದ ಕೈಹಿಡಿದರೆ,
ಗಂಡಾ, ನಿನಗೆ ಸೈರಣೆಯೆಂತಾಯಿತ್ತು ಹೇಳಾ ?
ಚೆನ್ನಮಲ್ಲಿಕಾರ್ಜುನಯ್ಯಾ,
ನಿನ್ನ ತೋಳ ಮೇಲಣವಳನನ್ಯರೆಳದೊಯ್ಯುವರೆ ನೋಡುತಿಹುದುಚಿತವೆ ಕರುಣಿಗಳರಸಾ ?

Leave a Comment

Your email address will not be published. Required fields are marked *