ಗುಣ ದೋಷ ಸಂಪಾದನೆಯ ಮಾಡುವನ್ನಕ್ಕ

ಗುಣ ದೋಷ ಸಂಪಾದನೆಯ ಮಾಡುವನ್ನಕ್ಕ
ಕಾಮದ ಒಡಲು, ಕ್ರೋಧದ ಗೊತ್ತು, ಲೋಭದ ಇಕ್ಕೆ,
ಮೋಹದ ಮಂದಿರ, ಮದದಾವರಣ, ಮತ್ಸರದ ಹೊದಕೆ.
ಆ ಭಾವವರತಲ್ಲದೆ ಚೆನ್ನಮಲ್ಲಿಕಾರ್ಜುನನ ಅರಿವುದಕ್ಕೆ ಇಂಬಿಲ್ಲ ಕಾಣಿರಣ್ಣಾ.

Leave a Comment

Your email address will not be published. Required fields are marked *