ಜಯ ಜಾಹ್ನವಿ ದೇವಿ ಜಯ ಭಕುತ ಸಂಜೀವಿ
ಜಯ ಪ್ರದಾಯಕ ವೀವೆ
ಜಯ ಎಮ್ಮ ಕಾವೆ
ಅಜನ ಸಭೆಯಲಿ ವರುಣಗೆ ಶಾಪವು ಬರಲು
ಪ್ರಜಪಾಲನಾದ ಶಂತುನ ನಾಮದೀ
ನಿಜರೂಪದಲಿ ಬಂದು ಅಷ್ಟವಸುಗಳ ಪಡೆದೆ
ಭಜಿಸಬಲ್ಲೆನೆ ನಿನ್ನ ಬಹು ಭಾಗ್ಯವಂತೇ||1||
ಭಗೀರಥಗೆ ವೊಲಿದು ಭವದೂರ ಪಾವನಕಾರೆ
ಸಗರರಾಯನ ವಂಶವನ್ನೆ ಉದ್ಧಾರೆ
ಅಗಣಿತೋದಯ ಪಾರಂವಾರೆ ಶುಭಶರೀರೆ
ಮುಗುವೆನು ಕರವೆತ್ತಿ ಸಂತತ ವಾರಂವಾರೆ ||2||
ಏನು ಧನ್ಯರೊ ಎನ್ನ ಕುಲಕ ಪಾವನೆಯೆನಲು
ನೀನುಬ್ದಿ ಪೊರದೆ ಉತ್ಸಾಹದಿ ಮೆರೆದೆ
ಮಾನನಿಧಿ ವಿಜಯವಿಠ್ಠಲನ ಸನ್ನಿಧಿಯಲ್ಲಿನಪೂರ್ವಕ
ವೊಲಿದು ಭಕುತಿ ಕೊಡು ಎನಗೆ ||3||