ತಲ್ಲಣಿಸದಿರು ಕಂಡ್ಯ ತಾಳು ಮನವೆ
ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ
ಬೆಟ್ಟದಾ ತುದಿಯಲ್ಲಿ ಹುಟ್ಟಿದ ವೃಕ್ಷಕ್ಕೆಕಟ್ಟೆಯನು ಕಟ್ಟಿ ನೀರೆರೆದವರು ಯಾರೊಪುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲುಗಟ್ಯಾಗಿ ಸಲಹುವನು ಇದಕೆ ಸಂಶಯವಿಲ್ಲ ||1||
ಅಡವಿಯೊಳಗಾಡುವ ಮೃಗಪಕ್ಷಿಗಳಿಗೆಲ್ಲಅಡಿಗಡಿಗೆ ಆಹಾರವಿತ್ತವರು ಯಾರೊ ಪಡೆದ ಜನನಿಯ ತೆರದಿ ಸ್ವಾಮಿ ಹೊಣೆಗೀಡಾಗಿಬಿಡದೆ ರಕ್ಷಿಪನು ಇದಕೆ ಸಂಶಯವಿಲ್ಲ||2||
ನವಿಲಿಗೆ ಚಿತ್ರ ಬರೆದವರು ಯಾರುಪವಳದ ಲತೆಗೆ ಕೆಂಪಿಟ್ಟವರು ಯಾರುಸವಿಮಾತಿನರಗಿಳಿಗೆ ಹಸುರು ಬರೆದವರು ಯಾರುಅವನೆ ಸಲಹುವನು ಇದಕೆ ಸಂಶಯವಿಲ್ಲ||3||
ಕಲ್ಲಿನಲಿ ಹುಟ್ಟಿ ಕೂಗುವ ಕಪ್ಪೆಗಳಿಗೆಲ್ಲಅಲ್ಲಲ್ಲಿಗಾಹಾರ ತಂದೀವರಾರುಬಲ್ಲಿದನು ಕಾಗಿನೆಲೆಯಾದಿಕೇಶವರಾಯಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ ||4||