ತೀರ್ಥ ಪಿಡಿದವರೆಲ್ಲ ತಿರುನಾಮಧಾರಿಗಳೆ – ಜನ್ಮ
ಸಾರ್ಥಕವಿಲ್ಲದವರೆಲ್ಲ ಭಾಗವತರೆ
ಮೂಗ್ಹಿಡಿದು ನೀರೊಳಗೆ ಮುಳುಗಿ ಜಪತಪ ಮಾಡಿನಿಗಮಾಗಮ ಪುರಾಣಗಳನೋದಿ ತಿಳಿದುಬಾಗಿ ಪರಸ್ತ್ರೀಯರನು ಬಯಸಿ ಕಣ್ಣಿಡುವಂಥಯೋಗ ಭ್ರಷ್ಟರೆಲ್ಲ ದೇವ ಬ್ರಾಹ್ಮಣರೆ ? ||1||
ಪಟ್ಟೆ ನಾಮವ ಬಳಿದು ಪಾತ್ರೆ ಕೈಯಲಿ ಹಿಡಿದು ಗುಟ್ಟಿನಲಿ ಜಪಿಸುವ ಗುರುತರಿಯದೆಕೆಟ್ಟ ಕೂಗನು ಕೂಗಿ ಹೊಟ್ಟೆಯನು ಹೊರೆವಂಥಪೊಟ್ಟೆಗುಡುಮಗಳೆಲ್ಲ ಪರಮ ವೈಷ್ಣವರೆ ? ||2||
ಲಿಂಗಾಂಗದೊಳಗಿರುವ ಚಿನ್ಮಯವ ತಿಳಿಯದೆಅಂಗಲಿಂಗದ ನೆಲೆಯ ಗುರುತರಿಯದೆಜಂಗಮ ಸ್ಥಾವರದ ಹೊಲಬನರಿಯದ ಇಂಥಭಂಗಿಮುಕ್ಕಗಳೆಲ್ಲ ನಿಜ ಲಿಂಗವಂತರೆ ? ||3||
ಅಲ್ಲಾ ಖುದಾ ಎಂಬ ಅರ್ಥವನು ತಿಳಿಯದೆಮುಲ್ಲ ಶಾಸ್ತ್ರದ ನೆಲೆಯ ಮುನ್ನರಿಯದೆಪೊಳ್ಳು ಕೂಗನು ಕೂಗಿ ಬಗುಳಿ ಬಾಯಾರುವಂಥಕಳ್ಳ ಸುಳ್ಳರಿಗೆಲ್ಲ ವೀರ ಸ್ವರ್ಗವುಂಟೆ ?||4||
ವೇಷ ಭಾಷೆಯ ಕಲಿತು ಗೋಸಾಯಿ ಉಡೆದೊಟ್ಟುಆಸೆಯನು ತೊರೆಯದೆಯೆ ತಪಕೆ ಕುಳಿತುವಾಸನೆಯ ಗುರುತಿನಾ ಹೊಲಬನರಿಯದ ಇಂಥವೇಷಧಾರಿಗಳೆಲ್ಲ ಸಂನ್ಯಾಸಿಗಳೆ ? ||5||
ಆರು ಚಕ್ರದ ನೆಲೆಯ ಅಷ್ಟಾಂಗ ಯೋಗದಲಿಮೂರು ಮೂರ್ತಿಯ ಮೂರು ಕಡೆಯೊಳಿರಿಸಿಮಾರ ಪಿತನಹ ಕಾಗಿನೆಲೆಯಾದಿ ಕೇಶವನಸಾರಿ ಭಜಿಸಿದವರಿಗೆ ಕೊರೆವ ಕೊರತೆಯುಂಟೆ ? ||6||